ಮುಂದಿನ 28 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ – ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ!

ಮುಂದಿನ 28 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ – ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ!

ಬೆಂಗಳೂರು: ರಾಜ್ಯದಲ್ಲಿ ಮಳೆರಾಯನ ಅಬ್ಬರ ಮುಂದುವರಿಯಲಿದ್ದು,  ಸಿಲಿಕಾನ್‌ ಸಿಟಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 28 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಒಂದು ವಾರಗಳಿಂದ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಆದ್ರೆ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಬಿಸಿಲಿನ ತಾಪ ಮಾತ್ರ ಕಡಿಮೆಯಾಗಿಲ್ಲ. ಗುಡುಗು-ಮಿಂಚು ಕಾಣಿಸಿಕೊಂಡರೂ ಕರಾವಳಿ ಭಾಗದಲ್ಲಿ ಮಳೆಯಾಗಿಲ್ಲ. ಶುಕ್ರವಾರ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ:  ಜೂನ್‌ 1 ರಿಂದ ಕರಾವಳಿಯಲ್ಲಿ ಮೀನುಗಾರಿಕೆ ಬಂದ್‌! – ರೂಲ್ಸ್‌ ಬ್ರೇಕ್‌ ಮಾಡಿದ್ರೆ ಕಠಿಣ ಕ್ರಮ..

ಇನ್ನು ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಹಾಗೂ ರಾತ್ರಿ ವೇಳೆಗೆ ಬಿರುಗಾಳಿ ಸಹಿತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ತಮಿಳುನಾಡಿನಲ್ಲಿ ಸುಳಿಗಾಳಿ ಉಂಟಾಗಿರುವ ಹಿನ್ನಲೆ, ಕರ್ನಾಟಕದ ಮೇಲೂ ಪರಿಣಾಮ ಬೀರಲಿದೆ. ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬೀಸಲಿದೆ. ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ತುಮಕೂರು, ರಾಮನಗರ, ಕೋಲಾರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಮಲೆನಾಡು ಪ್ರದೇಶದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಒಳನಾಡಿನ ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ಭಾನುವಾರ ಮತ್ತು ಸೋಮವಾರ ಸುರಿದ ಮಳೆಗೆ ಬೆಂಗಳೂರಿನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಕೆಆರ್ ಸರ್ಕಲ್ ಬಳಿಯ ಅಂಡರ್​ಪಾಸ್​ ದುರಂತ ಇಡೀ ರಾಜಧಾನಿಯನ್ನೇ ಬೆಚ್ಚಿಬೀಳಿಸಿತ್ತು.

suddiyaana