ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ – ರಸ್ತೆಗಳು ಜಲಾವೃತವಾಗಿ ಟ್ರಾಫಿಕ್ ಜಾಮ್, ಸವಾರರ ಪರದಾಟ!

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ – ರಸ್ತೆಗಳು ಜಲಾವೃತವಾಗಿ ಟ್ರಾಫಿಕ್ ಜಾಮ್, ಸವಾರರ ಪರದಾಟ!

ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದೆ. ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಹಲವು ಏರಿಯಾಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತ, ಜಯನಗರ, ಲಾಲ್ ಬಾಗ್, ಬಸವನಗುಡಿ ಸೇರಿದಂತೆ ಹಲವೆಡೆ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.

ನಗರದ ಹಲವೆಡೆ ಗುಡುಗು ಸಹಿತ ಜೋರು ಮಳೆಯಾಗುತ್ತಿದ್ದು, ಮುಂದಿನ 3 ಗಂಟೆಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದ್ದು, ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಬೆಂಗಳೂರು ನಗರ, ಗ್ರಾಮಾಂತರದಲ್ಲೂ ಮಳೆಯಾಗಿದೆ. ಶಾಂತಿನಗರ, ಜಯನಗರ, ಕೆಆರ್​ ಮಾರುಕಟ್ಟೆ, ವಿಜಯನಗರ, ಮೆಜೆಸ್ಟಿಕ್, ಬನಶಂಕರಿ, ಜೆಪಿನಗರ, ರಾಜಾಜಿನಗರ ಸೇರಿದಂತೆ ಹಲವೆಡೆ ಮಳೆ ಸುರಿಯುತ್ತಿದೆ. ನಗರದ ತಗ್ಗು ಪ್ರದೇಶಗಳ ರಸ್ತೆಗಳು ಜಲಾವೃತಗೊಂಡಿದ್ದು, ದ್ವಿಚಕ್ರ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ಹೀಗೇ ಮುಂದುವರಿದರೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.

suddiyaana