ಮಾಂಡೌಸ್ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ

ಬೆಂಗಳೂರು: ತಮಿಳುನಾಡಿನಲ್ಲಿನ ಚಂಡಮಾರುತದಿಂದಾಗಿ ರಾಜ್ಯದ ವಿವಿಧೆಡೆ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಇನ್ನೂ 3 ದಿನಗಳವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ 12ರಂದು ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಡಿ. 14ರವರೆಗೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಬೆಂಗಳೂರಿಗರೇ ಗುಡ್ ನ್ಯೂಸ್: ಶೀಘ್ರವೇ ವೈಟ್‌ಫೀಲ್ಡ್, ಎಲೆಕ್ಟ್ರಾನಿಕ್ಸ್ ಸಿಟಿಗೆ ಮೆಟ್ರೋ ಸಂಪರ್ಕ
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಎಚ್ಎಎಲ್ನಲ್ಲಿ 19.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 19.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 18.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.