ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಗುಡುಗು ಸಹಿತ ಧಾರಾಕಾರ ಮಳೆ

ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಗುಡುಗು ಸಹಿತ ಧಾರಾಕಾರ ಮಳೆ

ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಏಪ್ರಿಲ್ 3ರಂದು ಸೋಮವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯೂ ಸುರಿದಿತ್ತು. ಇನ್ನೂ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ  ಮುಂದಿನ 48 ಗಂಟೆಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆ!  

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 39.4 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

suddiyaana