ರಾಜ್ಯದಲ್ಲಿ ಮುಂದಿನ 1 ವಾರಗಳ ಕಾಲ ಭಾರಿ ಮಳೆ ಸಾಧ್ಯತೆ – ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ರಾಜ್ಯದಲ್ಲಿ ಮುಂದಿನ 1 ವಾರಗಳ ಕಾಲ ಭಾರಿ ಮಳೆ ಸಾಧ್ಯತೆ – ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಗುರುವಾರದಿಂದ ಮುಂದಿನ1 ವಾರದ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧಯತೆ ಇದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮತ್ತೆ ಮೂರು ಜಿಂಕೆಗಳು ಸಾವು – ಸಾವಿನ ಸಂಖ್ಯೆ 16ಕ್ಕೆ ಏರಿಕೆ!

ಇನ್ನು ರಾಜ್ಯದ ಕೆಲವು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು ಕರಾವಳಿಯ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು‌ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Shwetha M