ಕರ್ನಾಟಕದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ! – ಎಲ್ಲೆಲ್ಲಿ ಆರೆಂಜ್ ಅಲರ್ಟ್?

ರಾಜ್ಯದಲ್ಲಿ ವರುಣನ ಆಗಮನವಾಗಿದೆ. ಕಳೆದೊಂದು ವಾರದಿಂದ ಕರ್ನಾಟದ ಹಲವು ಭಾಗಗಳಲ್ಲಿ ಮಳೆ ಸುರಿಯುತ್ತಿದೆ. ಇದೀಗ ಭಾರತೀಯ ಹವಾಮಾನ ಇಲಾಖೆ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: KD ಚಿತ್ರ ತಂಡಕ್ಕೆ ಕಾನೂನು ಸಂಕಷ್ಟ! – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು IMD ತಿಳಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಕರ್ನಾಟಕದ ಹಲವು ಭಾಗಗಳಲ್ಲಿ ಕಳೆದೊಂದು ವಾರದಿಂದ ಮಳೆಯಾಗುತ್ತಿದೆ. ಬುಧವಾರ ಕೂಡ ಬೆಂಗಳೂರಿನ ಎಂಜಿ ರಸ್ತೆ, ಕಲ್ಯಾಣ್ ನಗರ, ಬಳ್ಳಾರಿ ರಸ್ತೆ, ಜಯನಗರ, ಬನಶಂಕರಿ, ಮೆಜೆಸ್ಟಿಕ್, ಶಾಂತಿನಗರ ಮತ್ತು ಕೋರಮಂಗಲದಂತಹ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ. ಬೆಂಗಳೂರಿನಲ್ಲಿ ಸಂಜೆ ತಡವಾಗಿ ಸುರಿದ ಮಳೆಯಿಂದಾಗಿ ನೀರು ನಿಂತು ವಾಹನ ಸವಾರರು ಪರದಾಡಿದ್ದರು. ಇನ್ನು ಹಳೆ ಮದ್ರಾಸ್ ರಸ್ತೆ, ಪೈ ಲೇಔಟ್, ಮಹದೇವಪುರ, ಅಲ್ಲಾಳಸಂದ್ರ ಮುಖ್ಯ ರಸ್ತೆ, ಚೊಕ್ಕಸಂದ್ರ ಮೇಲ್ಸೇತುವೆ, ಬಿಳೇಕಹಳ್ಳಿ–ಅರೆಕೆರೆ ರಸ್ತೆ, ಕೋಗಿಲು ರಸ್ತೆ, ಬಿನ್ನಿ ಮಿಲ್ ರಸ್ತೆ ಮತ್ತು ಹುಣಸೇಮರ ಜಂಕ್ಷನ್ ರಸ್ತೆ ಸೇರಿದಂತೆ ಹಲವು ಪ್ರಮುಖ ರಸ್ತೆಗಳಲ್ಲಿ ವಾಹನಸವಾರರು ಮಳೆಯಿಂದಾಗಿ ತೊಂದರೆಗೀಡಾಗಿದ್ದರು.
ದೆಹಲಿಯಲ್ಲೂ ಮಳೆ – ಜನರಿಗೆ ಐಎಂಡಿ ಎಚ್ಚರಿಕೆ
ಇನ್ನು ದೆಹಲಿಯಾದ್ಯಂತ ಬೀಸುತ್ತಿರುವ ವೇಗದ ಗಾಳಿಯಿಂದಾಗಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಜನ ಮನೆಯೊಳಗೆ ಸುರಕ್ಷಿತವಾಗಿ ಇರಬೇಕು. ಕಿಟಕಿಗಳು, ವಿದ್ಯುತ್ ಕಂಬಗಳು ಮತ್ತು ವಿದ್ಯುತ್ ಲೈನ್ ಬಳಿ ನಿಲ್ಲಬಾರದು. ಶಿಥಿಲಗೊಂಡ ಕಟ್ಟಡಗಳಿಂದ ದೂರವಿರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಕೆಟ್ಟ ಹವಾಮಾನದಿಂದಾಗಿ 16 ವಿಮಾನಗಳನ್ನು ಇತರ ನಗರಗಳಿಗೆ ತಿರುಗಿಸಲಾಗಿದೆ ಎಂದು ವರದಿಯಾಗಿದೆ.

ನೋಡಿರಿ

