ತೆಲಂಗಾಣದಲ್ಲಿ ಭಾರಿ ಮಳೆ.. ಪ್ರವಾಹ – ಜೀವ ಉಳಿಸಿಕೊಳ್ಳಲು ಮರವೇರಿ ಕುಳಿತ ವ್ಯಕ್ತಿ!

ತೆಲಂಗಾಣದಲ್ಲಿ ಭಾರಿ ಮಳೆ.. ಪ್ರವಾಹ – ಜೀವ ಉಳಿಸಿಕೊಳ್ಳಲು ಮರವೇರಿ ಕುಳಿತ ವ್ಯಕ್ತಿ!

ತೆಲಂಗಾಣ: ತೆಲಂಗಾಣದಲ್ಲಿ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ತೆಲಂಗಾಣದ ಖಮ್ಮಂ ಜಿಲ್ಲೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವು ಪ್ರದೇಶಗಳು ಜಲಾವೃತವಾಗಿದೆ. ಜನಜೀವನ ಅಸ್ತವ್ಯಸ್ತ ಉಂಟಾಗಿದ್ದು, ನೂರಾರು ಕುಟುಂಬಗಳು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ.

ಮುಂದಿನ 24 ಗಂಟೆಗಳ ಅವಧಿಯಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಶುಕ್ರವಾರ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ನಿರ್ದೇಶನದಂತೆ ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಹಿರಿಯ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಶಾಂತಿ ಕುಮಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಬೆತ್ತಲೆ ಮೆರವಣಿಗೆ ಪ್ರಕರಣದ ತನಿಖೆ ಸಿಬಿಐಗೆ ವಹಿಸಿದ ಕೇಂದ್ರ

ತೆಲಂಗಾಣದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ವೆಂಕಟಾಪುರ ಮಂಡಲದ ಲಕ್ಷ್ಮೀದೇವಿಪೇಟೆ ಗ್ರಾಮದಲ್ಲಿ 64.9 ಸೆಂ.ಮೀ ಮಳೆಯಾಗಿದ್ದು, ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಮಳೆಯಾಗಿದೆ. ಹೆಚ್ಚಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಿದ್ದು ಇನ್ನೂ ಕೆಲವರು ಮನೆಯ ಟಾರಸಿ ಮೇಲೆ ನಿಂತು ರಕ್ಷಣೆ ಪಡೆದಿದ್ದಾರೆ.

ಈ ನಡುವೆ ವ್ಯಕ್ತಿಯೊಬ್ಬ ಮರದ ಮೇಲೆ ಗಂಟೆಗಟ್ಟಲೆ ಕುಳಿತು ಜೀವ ಉಳಿಸಿಕೊಂಡಿರುವ ಘಟನೆ ನಡೆದಿದೆ. ಜಲಗಾಮ ನಗರದಲ್ಲಿ ಸುತ್ತಲೂ ಪ್ರವಾಹದ ನೀರು ತುಂಬಿ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ಈ ವೇಳೆ ಕೆಲ ಮನೆಯವರು ತಮ್ಮ ತಮ್ಮ ಜೀವ ಉಳಿಸಿಕೊಳ್ಳಲು ಮನೆಯ ಟಾರಸಿ ಮೇಲೆ ಹತ್ತಿ ನಿಂತಿದ್ದಾರೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬರು ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಮರವೇರಿದ್ದನೆ ಆದರೆ ಪ್ರವಾಹದ ನೀರಿನ ಪ್ರಮಾಣ ಹೆಚ್ಚಾಗಿತ್ತು .ಈ ವೇಳೆ ಮರವೇರಿದ ವ್ಯಕ್ತಿಯನ್ನು ಸುಮಾರು ಎರಡು ಮೂರು ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆ ಬಳಿಕ ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

suddiyaana