ಉತ್ತರ ಪ್ರದೇಶದಲ್ಲಿ ವರುಣನ ಆರ್ಭಟ – 17 ಜಿಲ್ಲೆಗಳಲ್ಲಿ ಪ್ರವಾಹ

ಉತ್ತರ ಪ್ರದೇಶದಲ್ಲಿ ವರುಣನ ಆರ್ಭಟ – 17 ಜಿಲ್ಲೆಗಳಲ್ಲಿ ಪ್ರವಾಹ

ದೇಶದ ಹಲವು ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, 17 ಜಿಲ್ಲೆಗಳಲ್ಲಿ ಪ್ರವಾಹ  ಪರಿಸ್ಥಿತಿ ಉಂಟಾಗಿದೆ. ಈವರೆಗೆ 12 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: ಶ್ರಾವಣ ಮಾಸದಲ್ಲಿ ಸೋಮವಾರ ಪೂಜೆ ಹೇಗಿರಬೇಕು – ಸಂಪತ್ತು, ಸಮೃದ್ಧಿ, ಅದೃಷ್ಟ ಬರಬೇಕಂದ್ರೆ ಹೇಗಿರಬೇಕು ಭಕ್ತಿ?

ಭಾರೀ ಮಳೆಯಿಂದಾಗಿ ಉತ್ತರ ಪ್ರದೇಶದ 17 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಗಂಗಾ ನದಿ ತಟದಲ್ಲಿರುವ ಪ್ರದೇಶಗಳು ಮುಳುಗಡೆಯಾಗುತ್ತಿವೆ. ಪ್ರಯಾಗ್‌ರಾಜ್ ನಗರದ ಸಲೋರಿ, ರಾಜಪುರ, ದಾರಗಂಜ್, ಬಘಾಡಾ ಮುಂತಾದ ಪ್ರದೇಶಗಳು ಮುಳುಗಿಹೋಗಿವೆ. ಇನ್ನು, ಮಿರ್ಜಾಪುರ, ವಾರಣಾಸಿ, ಅಯೋಧ್ಯೆ, ಚಂದೌಲಿ, ಬಲ್ಲಿಯಾದ ಪರಿಸ್ಥಿತಿಯೂ ತೀರಾ ಹದಗೆಟ್ಟಿದೆ. ಅಲ್ಲದೇ ಲಕ್ನೋ, ರಾಯ್ ಬರೇಲಿ, ಅಮೇಥಿ, ಸುಲ್ತಾನ್ಪುರ್, ಬಹ್ರೈಚ್ ಮತ್ತು ಅಂಬೇಡ್ಕರ್ ನಗರದಲ್ಲೂ ಭಾರೀ ಮಳೆ ಮುಂದುವರಿದಿದೆ.  ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇನ್ನು ಪ್ರಯಾಗ್‌ರಾಜ್‌ನಲ್ಲಿ ಗಂಗಾ-ಯಮುನಾ ಸಂಗಮದ ನಂತರ ಬರುವ ಪ್ರದೇಶಗಳು ಕೆಟ್ಟ ಸ್ಥಿತಿಯಲ್ಲಿವೆ. ಉಕ್ಕಿದ ಗಂಗೆ, ಯಮುನೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ NDRF, SDRF ತಂಡಗಳು ಈಗಾಗಲೇ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಉಳಿದಂತೆ ಜನರು ಸುರಕ್ಷಿತ ಸ್ಥಳಗಳಲ್ಲಿರುವಂತೆ ಸರ್ಕಾರ ಎಚ್ಚರಿಕೆ ನೀಡಿದೆ.

Shwetha M