ಮೋಚಾ ಚಂಡಮಾರುತ ಎಫೆಕ್ಟ್ – ಕರ್ನಾಟಕ, ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ

ಮೋಚಾ ಚಂಡಮಾರುತ ಎಫೆಕ್ಟ್ – ಕರ್ನಾಟಕ, ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಚಂಡಮಾರುತದ ಚಲನೆಯಿಂದಾಗಿ ಬಂಗಾಳಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಪ್ರಕ್ಷುಬ್ಧತೆ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮೇ11 ರಿಂದ ಕರ್ನಾಟಕ ಹಾಗೂ ಕೇರಳದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ಗುರುವಿನ ಗಾತ್ರದ ಗ್ರಹವನ್ನು ನುಂಗಿದ ನಕ್ಷತ್ರ! – ಭೂಮಿಗೆ ಎದುರಾಗಿದ್ಯಾ ಕಂಟಕ?

ಮೇ 11 ರಿಂದ  ಮೂರು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಗಾಳಿ ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕೇರಳದ ಪಟ್ಟನಂತಿಟ್ಟ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಯೆಲ್ಲೋ  ಅಲರ್ಟ್​ ನೀಡಲಾಗಿದೆ.

ಮೋಚಾ ಚಂಡಮಾರುತವು 2023 ರಲ್ಲಿ ಭಾರತಕ್ಕೆ ಅಪ್ಪಳಿಸುವ ಮೊದಲ ಚಂಡಮಾರುತವಾಗಿದೆ ಮತ್ತು ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ. ಚಂಡಮಾರುತದ ಪರಿಣಾಮ ಸಮೀಪದ ರಾಜ್ಯಗಳಲ್ಲಿ ಕಾಣಬಹುದು ಎಂದು ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಈ ರಾಜ್ಯಗಳಲ್ಲಿ ಸಾಧಾರಣ ಮಳೆಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಮತ್ತು ದೋಣಿ ನಿರ್ವಾಹಕರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರ, ಆಗ್ನೇಯ ಮತ್ತು ಸುತ್ತಮುತ್ತಲಿನ ಮಧ್ಯ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರ ತೆರಳದಂತೆ ಸೂಚಿಸಲಾಗಿದೆ.

suddiyaana