ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ

ನವದೆಹಲಿ: ತಿಂಗಳ ಆರಂಭದಲ್ಲೇ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಈಗ ತೈಲ ಕಂಪನಿ ಕೊಂಚ ರಿಲೀಫ್‌ ನೀಡಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 100 ರೂ.ನಷ್ಟು ಅಗ್ಗವಾಗಿದೆ. ಮಂಗಳವಾರದಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 99.75 ರೂ. ಇಳಿಕೆಯಾಗಿದೆ.

19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ 99.75 ರೂ. ಕಡಿತವಾಗಿದೆ. ಈ ಹಿನ್ನೆಲೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಮಾರಾಟ ಬೆಲೆ 1,680 ರೂ. ಆಗಿದೆ. ಇತರ ಮಹಾನಗರಗಳಲ್ಲಿ 93 ರೂಪಾಯಿಗಳ ಕಡಿತವನ್ನು ಮಾಡಲಾಗಿದೆ.

ಇದನ್ನೂ ಓದಿ: ದುನಿಯಾ ಮತ್ತಷ್ಟು ದುಬಾರಿ – ಹಾಲು, ತರಕಾರಿ, ಹೋಟೆಲ್​ ತಿನಿಸು ಎಲ್ಲವೂ ತುಟ್ಟಿ

ಮುಂಬೈನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1852.50 ರೂ. ಆಗಿದೆ. ಕೋಲ್ಕತ್ತಾದಲ್ಲಿ 1820.50 ಹಾಗೂ ಚೆನ್ನೈನಲ್ಲಿ 1852.50 ರೂ. ಆಗಿದೆ. ಆದರೆ ಗೃಹಬಳಕೆ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಗೃಹ ಬಳಕೆ ಸಿಲಿಂಡರ್ ಬೆಲೆ ಇಳಿಕೆ ಇಲ್ಲ

ಇನ್ನು ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸಲಾಗಿಲ್ಲ. ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆಯನ್ನು ಈ ವರ್ಷದ ಮಾರ್ಚ್ 1 ರಂದು ಕೊನೆಯದಾಗಿ ಪರಿಷ್ಕರಿಸಲಾಗಿತ್ತು. ಸಬ್ಸಿಡಿ ರಹಿತ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ದೆಹಲಿಯಲ್ಲಿ 1,103 ರೂಪಾಯಿ, ಕೋಲ್ಕತ್ತಾದಲ್ಲಿ 1,129 ರೂಪಾಯಿ, ಮುಂಬೈನಲ್ಲಿ 1,102.50 ರೂಪಾಯಿ, ಚೆನ್ನೈನಲ್ಲಿ 1,118.50 ರೂಪಾಯಿ ಕ್ರಯವಾಗುತ್ತಿದೆ.

ಎಲ್‌ಪಿಜಿ ಸಿಲಿಂಡರ್ ದರಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಿಸಲಾಗುತ್ತದೆ. ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಬೆಲೆ ಕಡಿತದ ನಂತರ ಜೂನ್‌ನಲ್ಲಿ ಈ ವರ್ಷದ ಮೊದಲ ಸಲ ಎಲ್‌ಪಿಜಿ ಸಿಲಿಂಡರ್ ದರಗಳನ್ನು ಹೆಚ್ಚಿಸಲಾಯಿತು. ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಕೊನೆಯದಾಗಿ ಮಾರ್ಚ್ 1 ರಂದು ಪ್ರತಿ ಸಿಲಿಂಡರ್‌ಗೆ 50 ರೂ.ಗಳಷ್ಟು ಏರಿಕೆ ಮಾಡಲಾಗಿತ್ತು. ಅದಾದ ನಂತರ ದರದಲ್ಲಿ ಇಳಿಕೆ ಮಾಡುತ್ತಲೇ ಬರಲಾಗಿದೆ. ಏಪ್ರಿಲ್‌ನಲ್ಲಿ ಪ್ರತಿ ಸಿಲಿಂಡರ್‌ಗೆ 91.50 ರೂಪಾಯಿ, ಮೇ ತಿಂಗಳಿನಲ್ಲಿ 171.50 ರೂಪಾಯಿ, ಜೂನ್‌ನಲ್ಲಿ 83.50 ರೂಪಾಯಿ ಇಳಿಕೆ ಮಾಡಲಾಗಿತ್ತು.

suddiyaana