ಅಫ್ಘಾನಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ಭಾರಿ ಹಿಮಪಾತ – 15 ಮಂದಿ ಸಾವು

ಅಫ್ಘಾನಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ಭಾರಿ ಹಿಮಪಾತ – 15 ಮಂದಿ ಸಾವು

ಅಫ್ಘಾನಿಸ್ತಾನದ ಹಲವು ಭಾಗಗಳಲ್ಲಿ ಭಾರಿ ಹಿಮಪಾತವಾಗುತ್ತಿದೆ. ಹಲವು ನಗರಗಳು ಸಂಪೂರ್ಣ ಹಿಮದಿಂದ ಕೂಡಿದೆ. ರಸ್ತೆಗಳಲ್ಲೂ ಹಿಮ ತುಂಬಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಭಾರಿ ಹಿಮಪಾತದಿಂದಾಗಿ 15 ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಾಗೂ 30 ಜನರು ಗಾಯಗೊಂಡಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಪೋಟ​ ಬೆನ್ನಲ್ಲೇ ಮತ್ತೊಂದು ವಿಧ್ವಂಸಕ ಕೃತ್ಯ ಬಯಲು – ನಿರ್ಮಾಣ ಹಂತದ ಕಟ್ಟಡದಲ್ಲಿ 6 ಬಾಂಬ್​ಗಳು ಪತ್ತೆ!

ಕಳೆದ ಕೆಲವು ದಿನಗಳಿಂದಾಗಿ ಬಾಲ್ಖ್ ಮತ್ತು ಫರಿಯಾಬ್  ಸೇರಿ ಅಫ್ಘಾನಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ಭಾರಿ ಹಿಮಪಾತವಾಗುತ್ತಿದೆ. ಹಿಮಪಾತದಿಂದಾಗಿ ಮನುಷ್ಯರು ಮಾತ್ರವಲ್ಲದೇ ಪ್ರಾಣಿಗಳು ಕೂಡ ಸಾವನ್ನಪ್ಪುತ್ತಿವೆ. ಸುಮಾರು ಹತ್ತು ಸಾವಿರ ಪ್ರಾಣಿಗಳು ಸಾವನ್ನಪ್ಪಿದೆ. ಜನಸಂಖ್ಯೆ ಹೆಚ್ಚಿರುವ ಪ್ರದೇಶದಲ್ಲಿ ಆತಂಕ ಹೆಚ್ಚಾಗಿದೆ. ಅನೇಕ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಇದರಿಂದ ಯಾವುದೇ ಸಂಪರ್ಕವನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು ವರದಿಯಾಗಿದೆ.

ಸರ್ಕಾರ ಪರಿಸ್ಥಿತಿ ನಿಯಂತ್ರಿಸಲು ಎಲ್ಲಾ ಪ್ರಾಂತ್ಯಗಳಲ್ಲಿ ಕ್ರಮ ಕೈಗೊಳ್ಳುತ್ತಿದೆ. ಈ ಸಮಿತಿಗಳು ನಿರ್ಬಂಧಿತ ರಸ್ತೆಗಳನ್ನು ತೆರೆಯಲು, ಸಂಕಷ್ಟಕ್ಕೆ ಒಳಗಾದ ಜನರಿಗೆ ಆಹಾರ ಮತ್ತು ಮೇವನ್ನು ವಿತರಿಸಲು ಹಾಗೂ ಭಾರೀ ಹಿಮಪಾತದಲ್ಲಿ ಸಿಲುಕಿರುವವರನ್ನು ಜನರನ್ನು ರಕ್ಷಿಸುವ ಕೆಲಸ ಮಾಡಲಿದೆ ಎಂದು ಕೃಷಿ, ನೀರಾವರಿ ಮತ್ತು ಜಾನುವಾರು ಸಚಿವಾಲಯದ ತಾಲಿಬಾನ್-ನೇಮಕ ವಕ್ತಾರ ಮಿಸ್ಬಾಹುದ್ದೀನ್ ಮುಸ್ತೀನ್ ಹೇಳಿದ್ದಾರೆ.

Shwetha M