ಇನ್ಮುಂದೆ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ!
ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೇ ಪ್ರಯಾಣ ಮಾಡುತ್ತಿದ್ದಾರೆ. ಅಪಘಾತ ಪ್ರಕರಣಗಳಲ್ಲಿ ಲೆಕ್ಕವಿಲ್ಲದಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಮಕ್ಕಳಿಗೆ ಹೆಲ್ಮೆಟ್ ಹಾಕದೇ ಇರೋದು. ಈ ಹಿನ್ನೆಲೆಯಲ್ಲಿ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಿದೆ. ಇದೀಗ 6 ವರ್ಷದ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ.
ಇದನ್ನೂ ಓದಿ: ಗಗನಕ್ಕೇರುತ್ತಿದೆ ಬೆಳ್ಳುಳ್ಳಿ ಬೆಲೆ! – ಕೆ.ಜಿ ಬೆಳ್ಳುಳ್ಳಿಗೆ 500ರ ಗಡಿದಾಟಿದ ದರ!
ಬೆಂಗಳೂರು ಪೊಲೀಸರು ಈ ಖಡಕ್ ಆದೇಶ ಹೊರಡಿಸಿದ್ದಾರೆ. ಇನ್ನುಮುಂದೆ 6 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ ಮಾಡಿಲಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಬೈಕ್ಗಳಲ್ಲಿ ಕರೆದೊಯ್ಯುವಾಗ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎಂದು ಪೊಲೀಸರು ಸೂಚನೆ ನೀಡಿದ್ದಾರೆ. ಹಾಗೂ ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಹೋಗುವ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನಿಸಿದ್ದಾರೆ.
ಅಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವವರ ವಿರುದ್ಧವೂ ಕ್ರಮಕೈಗೊಳಲಾಗುತ್ತದೆ. ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಸಾರ್ವಜನಿಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಎಚ್ಚರಿಸಿದ್ದು, ಶಾಲೆಗಳ ಬಳಿ ಸ್ಪೆಷಲ್ ಡ್ರೈವ್ ಮಾಡಲು ಟ್ರಾಫಿಕ್ ಪೊಲೀಸರು ಸಿದ್ದತೆ ನಡೆಸುತ್ತಿದ್ದಾರೆ.