ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯಸ್ಥಿತಿ ಗಂಭೀರ – ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯಸ್ಥಿತಿ ಗಂಭೀರ – ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್‌ ಆಗಿತ್ತು. ಬೆಂಗಳೂರಿನ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ ಅವರನ್ನು ಇಡಲಾಗಿದೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಹೇಮಾ ಅವರ ಮಗ ಐರ್ಲೆಂಡ್​ನಲ್ಲಿ ಇದ್ದಾರೆ. ಅವರ ಆಗಮನಕ್ಕಾಗಿ ಹೇಮಾ ಕಾಯುತ್ತಿದ್ದಾರೆ. ಹೇಮಾ ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ಮತ್ತೆ ಮತ್ತೆ ಕಾರ್ತಿಕ್‌ ಕೋಪಕ್ಕೆ ಗುರಿಯಾದ ಸಂಗೀತಾ! – ದ್ವೇಷ ಮರೆತು ಒಂದಾದ್ರಾ ವಿನಯ್‌, ಕಾರ್ತಿಕ್‌?

70ರ ದಶಕದಲ್ಲೇ ಹೇಮಾ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಅವರು ಹಲವು ಸಿನಿಮಾಗಳಲ್ಲಿ ನಟಿಸಿದರು. ಕನ್ನಡ, ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಧಾರಾವಾಹಿಗಳಲ್ಲೂ ಅವರು ಬಣ್ಣ ಹಚ್ಚಿದ್ದಾರೆ. ‘ಅಮೃತವರ್ಷಿಣಿ’ ಧಾರಾವಾಹಿ ಮೂಲಕ ಲೀಲಾವತಿ ಚೌಧರಿ ಕಿರುತೆರೆ ಲೋಕದಲ್ಲೂ ಮಿಂಚಿದರು. ಈಗ ಅವರಿಗೆ ಅನಾರೋಗ್ಯ ಉಂಟಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

Shwetha M