ಡಿಕೆಶಿಗೆ ಕೈ ತಪ್ಪಿತಾ ಸಿಎಂ ಸ್ಥಾನ..? – ಗಲಾಟೆ ಸಾಧ್ಯತೆ ಹಿನ್ನೆಲೆ ರಾಮನಗರದಲ್ಲಿ ಹೈ ಅಲರ್ಟ್!

ಡಿಕೆಶಿಗೆ ಕೈ ತಪ್ಪಿತಾ ಸಿಎಂ ಸ್ಥಾನ..? – ಗಲಾಟೆ ಸಾಧ್ಯತೆ ಹಿನ್ನೆಲೆ ರಾಮನಗರದಲ್ಲಿ ಹೈ ಅಲರ್ಟ್!

ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಾಗಿನಿಂದಲೂ ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆದಿತ್ತು. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಬ್ಬರೂ ಕೂಡ ಪಟ್ಟು ಕದಲಿಸದೆ ಹಠಕ್ಕೆ ಬಿದ್ದಿದ್ರು. ಆದರೆ 5 ದಿನಗಳ ಕಸರತ್ತಿನ ಬಳಿಕ ಕೊನೆಗೂ ಸಿಎಂ ಕುರ್ಚಿ ಸಿದ್ದರಾಮಯ್ಯ ಪಾಲಾಗಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಗದ್ದುಗೆ ಡಿಕೆಶಿ ಕೈ ತಪ್ಪಿದೆ ಎಂಬ ಮಾಹಿತಿ ಹೊರಬಿದ್ದಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಡಿ.ಕೆ ಶಿವಕುಮಾರ್ ಅವರ ತವರು ಜಿಲ್ಲೆ ರಾಮನಗರದಲ್ಲಿ ಬಂದೋಬಸ್ತ್ ಹೆಚ್ಚಿಸಲಾಗಿದೆ. ಹೈ ಅಲರ್ಟ್ ಆಗಿರುವಂತೆ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಪ್ರಾಯಶ್ಚಿತ ಪಾದಯಾತ್ರೆ.. ಗ್ರಾಮಗಳಲ್ಲೇ ವಾಸ್ತವ್ಯ – ಸೋಲಿನ ಬಳಿಕ ಜನರತ್ತ ವೈಎಸ್​ವಿ ದತ್ತ!

ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೈತಪ್ಪಬಹುದು ಎಂದು ಅವರ ಅಭಿಮಾನಿಗಳು ಗಲಾಟೆ ಮಾಡುವ ಸಾಧ್ಯತೆಗಳು ಇವೆ. ಆದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ಸಂದೇಶ ರವಾನಿಸಲಾಗಿದೆ. ಹಾಗೇ ರಾಮನಗರ ಜಿಲ್ಲೆಗೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ಬೆಂಗಳೂರು, ಮೈಸೂರಿನಿಂದ 6 ಕೆಎಸ್​ಆರ್​ಪಿ ತುಕಡಿ ಆಗಮನವಾಗಿದ್ದು, ಫುಲ್ ಬಂದೋಬಸ್ತ್​ ಮಾಡಲಾಗಿದೆ. ಈ ಹಿಂದೆ ಡಿ.ಕೆ ಶಿವಕುಮಾರ್ ಅವರು ಜೈಲಿಗೆ ಹೋದ ಸಂದರ್ಭದಲ್ಲಿ ರಾಮನಗರ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಅಹಿತಕರ ಘಟನೆಗಳು ನಡೆದಿದ್ದವು. ಇದೀಗ  ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಗಲಾಟೆಗಳಾಗುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಮನಗರದಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ.

ಸಿಎಂ ಸ್ಥಾನಕ್ಕಾಗಿ ಪ್ರಬಲ ಪೈಪೋಟಿ ನಡೆಸಿದ್ದ ಡಿ.ಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಇದರ ಜೊತೆಗೆ ಇಂಧನ ಹಾಗೂ ನೀರಾವರಿ ಖಾತೆ ನೀಡುವ ಒಪ್ಪಂದವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ (ಮೇ 18)ದಂದು ಸಿದ್ದರಾಮಯ್ಯನವರ ಜೊತೆಗೆ ಡಿ.ಕೆ ಶಿವಕುಮಾರ್ ಕೂಡ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

suddiyaana