ಸಾರಿಗೆ ನೌಕರರಿಗೆ ಹೈಕೋರ್ಟ್‌ ಶಾಕ್‌! – ನಾಳೆ ನಡೆಯಬೇಕಿದ್ದ ಮುಷ್ಕರ ಮುಂದೂಡಿಕೆ!

ಸಾರಿಗೆ ನೌಕರರಿಗೆ ಹೈಕೋರ್ಟ್‌ ಶಾಕ್‌! – ನಾಳೆ ನಡೆಯಬೇಕಿದ್ದ ಮುಷ್ಕರ ಮುಂದೂಡಿಕೆ!

ವಿವಿಧ ಬೇಡಿಕೆಗಳನ್ನ ಇಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಾಳೆ ಮುಷ್ಕರಕ್ಕೆ ಮುಂದಾಗಿದ್ರು. ಆದ್ರೀಗ ಬುಧವಾರ ನಡೆಯಬೇಕಿದ್ದ ಸಾರಿಗೆ ಮುಷ್ಕರವನ್ನು ಮುಂದೂಡುವಂತೆ ಹೈಕೋರ್ಟ್‌ ಸೂಚನೆ ನೀಡಿದೆ.

ಇದನ್ನೂ ಓದಿ: ರಾಹುಲ್‌ ಗಾಂಧಿ ನೇತೃತ್ವದ ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಿಕೆ!

ವಿವಿಧ ಬೇಡಿಕೆ ಈಡೇರಿಸುವಂತೆ ಸಾರಿಗೆ ನೌಕರರು ಮುಷ್ಕರ ನಡೆಸಲು ಕರೆ ನೀಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ಸಂಧಾನ ಸಭೆ ನಡೆಸಿದರು. ಆದರೆ, ಈ ಸಂಧಾನ ಸಭೆ ವಿಫಲವಾಗಿದೆ. ಸಾರಿಗೆ ನೌಕರರು ನಾಳೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಆದರೆ, ಇದೀಗ ಸಾರಿಗೆ ನೌಕರರಿಗೆ ಹೈಕೋರ್ಟ್​ ಶಾಕ್​ ನೀಡಿದೆ. ನಾಳೆ ನಡೆಯಬೇಕಿದ್ದ ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಹೈಕೋರ್ಟ್‌ ಸೂಚನೆ ನೀಡಿದೆ.

ನಾಳಿನ ಸಾರಿಗೆ ನೌಕರರ ಪ್ರತಿಭಟನೆ ಪ್ರಶ್ನಿಸಿ ವಕೀಲ ಎನ್ ಪಿ ಅಮೃತೇಶ್ ಮತ್ತಿತರರಿಂದ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಿಸಿದ ಹೈಕೋರ್ಟ್​, ಒಂದು ದಿನದ ಮಟ್ಟಿಗೆ ಮುಷ್ಕರವನ್ನ ಮುಂದೂಡುವಂತೆ ಸೂಚನೆ ನೀಡಿದೆ. ಹೀಗಾಗಿ ನಾಳೆ ಬಹುತೇಕ ಸರ್ಕಾರಿ ಬಸ್​ಗಳು ಎಂದಿನಂತೆ ಓಡಾಟ ನಡೆಸಲಿವೆ. ನಾಳೆ ಒಂದು ದಿನ ನೌಕರರು ಮುಷ್ಕರದಲ್ಲಿ ಭಾಗಿಯಾಗಲ್ಲ. ಕೋರ್ಟ್ ನಿರ್ದೇಶನ ಹಿನ್ನೆಲೆ ನಾಳೆ ಮುಷ್ಕರ ಇರುವುದಿಲ್ಲ ಎಂದು ನ್ಯೂಸ್ ಫಸ್ಟ್​ಗೆ ಬಂದ್​ಗೆ ಕರೆ ಕೊಟ್ಟ ಜಂಟಿ ಕ್ರಿಯಾ ಸಮಿತಿ ಮಾಹಿತಿ ನೀಡಿದೆ.

ಸಾರಿಗೆ ನೌಕರರ ಬೇಡಿಕೆಗಳು?

  • 38 ತಿಂಗಳ ವೇತನದ ಅರಿಯರ್ಸ್ ಬಾಕಿ ಹಣ ನೀಡಬೇಕು
  • ಸರ್ಕಾರಿ ನೌಕರರಿಗೆ ನೀಡುವ ವೇತನಕ್ಕೆ ಸರಿಸಮಾನ ವೇತನ ನೀಡಬೇಕು
  • ಖಾಸಗೀಕರಣ ಭ್ರಷ್ಟಾಚಾರ ಕಾರ್ಮಿಕರ ಕಿರುಕುಳ ನಿಲ್ಲಬೇಕು
  • ನಗದು ರಹಿತ ವೈದ್ಯಕೀಯ ಸೌಲಭ್ಯ
  • ನಮ್ಮ ಹಕ್ಕಿನ ರಜೆ
  • 1-1-2024 ರಿಂದ ವೇತನ ಜಾರಿಗೊಳಿಸುವುದು
  • ಉತ್ತಮ ಕ್ಯಾಂಟೀನ್ ವ್ಯವಸ್ಥೆ
  • ಈ ಹಿಂದೆ 2020 ಮತ್ತು 2021 ರ ಸಾರಿಗೆ ಮುಷ್ಕರ ಸಂದರ್ಭದಲ್ಲಿ ನೌಕರರ ಮೇಲೆ ಹಾಕಲಾಗಿರುವ
  • ಎಲ್ಲಾ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಬೇಕು
  • ಸಾರಿಗೆ ನಿಗಮದ ವಿದ್ಯುತ್‌ ಬಸ್‌ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು
  • ಈ ಬಸ್‌ಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ದತಿ ಕೈಬಿಡಬೇಕು

Shwetha M