ನಂದಿ ಬೆಟ್ಟದಲ್ಲಿ ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಹೈಕೋರ್ಟ್ ಅನುಮತಿ

ನಂದಿ ಬೆಟ್ಟದಲ್ಲಿ ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಹೈಕೋರ್ಟ್ ಅನುಮತಿ

ಬೆಂಗಳೂರು: ಚಿಕ್ಕಬಳ್ಳಾಪುರ ಬಳಿ ಇಶಾ ಫೌಂಡೇಷನ್ ವತಿಯಿಂದ ನಿರ್ಮಾಣವಾಗುತ್ತಿರುವ ಆದಿಯೋಗಿ ಪ್ರತಿಮೆ ನಿಗದಿತವಾಗಿದ್ದ ದಿನದಂದೇ ಅನಾವರಣ ಮಾಡಬಹುದು ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ:ವಿಧಾನಸೌಧದ ಮುಂಭಾಗದಲ್ಲಿ ಬಸವಣ್ಣ, ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಈಗಾಲೇ  ಪ್ರತಿಮೆ ನಿರ್ಮಾಣ ಆಗಿದ್ದು, ಜನವರಿ 15 ರಂದು ಲೋಕಾರ್ಪಣೆಗೆ ಸಿದ್ದವಾಗಿತ್ತು. ಆದರೆ ಜಮೀನು ವಿಚಾರವಾಗಿ ಇಶಾ ಫೌಂಡೇಷನ್ ವಿರುದ್ಧ ರೈತರು ಕೋರ್ಟ್ ಮೊರೆಹೋಗಿದ್ದರು. ದೂರನ್ನು ಆಲಿಸಿದ ನ್ಯಾಯಾಲಯ, ಈ ಪ್ರದೇಶದಲ್ಲಿ ಯಾವುದೇ ಅಭಿವೃದ್ದಿ ಕಾರ್ಯ ನಡೆಸದಂತೆ ತಡೆಯಾಜ್ಞೆ ನೀಡಿತ್ತು. ಅರ್ಜಿದಾರರು ಮತ್ತು ಪ್ರತಿವಾದದ ಎರಡೂ ವಾದಗಳನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ವರಾಳೆ ನೇತೃತ್ವದ ಪೀಠವು, ಆದಿಯೋಗಿ ಪ್ರತಿಮೆ ಸ್ಥಾಪನೆ ಕಾರ್ಯ ಮತ್ತು ಚಟುವಟಿಕೆಗಳನ್ನು ಯೋಜಿಸಿದ ರೀತಿಯಲ್ಲಿಯೇ ನಡೆಸಬಹುದು ಎಂದು ಸ್ಪಷ್ಟಪಡಿಸಿದೆ.

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ ಕೆ. ಸುಧಾಕರ್ ಸೇರಿದಂತೆ ಗಣ್ಯಾತಿಗಣ್ಯರು ಆಶ್ರಮಕ್ಕೆ ಆಗಮಿಸಿ ಜನವರಿ 15ರಂದು ಸಂಜೆ ಆದಿಯೋಗಿ ಮೂರ್ತಿ ಉದ್ಘಾಟನೆ ಮಾಡಲಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಇಶಾ ಫೌಂಡೇಶನ್​ ವತಿಯಿಂದ ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿತ್ತು. ಸರ್ಕಾರ ಮತ್ತು ಇಶಾ ಯೋಗ ಕೇಂದ್ರ ಸೇರಿ 16 ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತ್ತು. ಆದಿಯೋಗಿ ಪ್ರತಿಮೆ ಸ್ಥಾಪನೆ ಸ್ಥಳವು ಪರಿಸರ ಸೂಕ್ಷ್ಮ ವಲಯವಾಗಿದ್ದು, ಅದನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಸರಿಯಲ್ಲ ಎಂದು ಅರ್ಜಿದಾರರ ಪರ ವಕೀಲ ಎಂ. ಶಿವಪ್ರಕಾಶ್  ಕೋರ್ಟ್​​ ಮೊರೆಹೋಗಿದ್ದರು.

suddiyaana