ವಾಹನ ಸವಾರರೇ ಎಚ್ಚರ – ಈ ಕೆಲಸ ಮಾಡಿಲ್ಲ ಅಂದ್ರೆ ಬೀಳುತ್ತೆ ದಂಡ

ವಾಹನ ಸವಾರರಿಗೆ ಸಾರಿಗೆ ಇಲಾಖೆ ಶಾಕ್ ಕೊಡೋಕೆ ಮುಂದಾಗಿದೆ. ಸೆಪ್ಟೆಂಬರ್ 15ರೊಳಗೆ ಹೆಚ್ಎಸ್ಆರ್ಪಿ ನಂಬರ್ ಅಳವಡಿಸಿಕೊಂಡಿಲ್ಲ ಅಂದರೆ ಭಾರೀ ದಂಡ ಕಟ್ಟಬೇಕಾಗುತ್ತದೆ ಎಂದು ಸಾರಿಗೆ ಇಲಾಖೆ ಹೇಳಿದೆ.
ಇದನ್ನೂ ಓದಿ: ಬಿಗ್ ಬಾಸ್ ನಿಂದ ಕಿಚ್ಚ ಔಟ್? -ವಾರದ ಕಥೆ ಯಾರ ಜೊತೆ?
ವಾಹನಗಳಿಗೆ ಹೆಚ್ಎಸ್ಆರ್ಪಿ ಅಳವಡಿಕೆಗೆ ಸೆಪ್ಟೆಂಬರ್ 15 ಡೆಡ್ಲೈನ್ ಆಗಿದೆ. ಸೆಪ್ಟೆಂಬರ್ 15ರ ನಂತರ ನಿಮ್ಮ ವಾಹನಕ್ಕೆ ಹೆಚ್ಎಸ್ಆರ್ಪಿ ಇಲ್ಲದ್ರೆ ದಂಡ ಹಾಕಲಾಗುತ್ತದೆ. ವಾಹನಗಳಿಗೆ ಹೈಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್ ಆಳವಡಿಕೆಗೆ 5 ದಿನವಷ್ಟೇ ಬಾಕಿ ಇದೆ. 2019 ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಕ್ಕೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ ಆಗಿದೆ. ಮೊದಲ ಬಾರಿಗೆ 500 ರೂಪಾಯಿ ದಂಡ, ಎರಡನೇ ಬಾರಿ ಸಿಕ್ಕಿಬಿದ್ರೆ 1000 ದಂಡ ಹಾಕಲು ಸಾರಿಗೆ ಇಲಾಖೆ ಪ್ಲಾನ್ ಮಾಡಿದೆ.
ಕೇಂದ್ರ ಸರ್ಕಾರ ಇಡೀ ದೇಶದಲ್ಲೇ ಏಕ ಮಾದರಿಯ ನಂಬರ್ ಪ್ಲೇಟ್ ಇರಬೇಕೆಂಬ ದೃಷ್ಟಿಯಿಂದ ಮತ್ತು ಅಪರಾಧ ಕೃತ್ಯಗಳ ಬಗ್ಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್‌ನಿಂದ ಮಾಹಿತಿ ಸಿಗಲಿದೆ ಎಂಬ ಉದ್ದೇಶದಿಂದ ಹೆಚ್‌ಎಸ್‌ಆರ್‌ಪಿಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಇದನ್ನು ಜನ ಇನ್ನೂ ತಮ್ಮ ವಾಹನಗಳಿಗೆ ಹಾಕಿಸಿಕೊಳ್ಳದೇ ಸುಮ್ಮನೇ ಇದ್ದು ಕೊನೇ ಗಳಿಗೆಯಲ್ಲಿ ಆನ್‌ಲೈನ್‌ನಲ್ಲಿ ಬುಕ್ ಮಾಡೋದಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ಒಂದು ವಾರ ಕಾಲಾವಕಾಶ ಇದೆ.ಬಳಿಕ ನಾವು ದಂಡ ಹಾಕುತ್ತೇವೆ. ಜೊತೆಗೆ ಟ್ರಾಫಿಕ್ ಪೊಲೀಸರೂ ಸಹ ಇದಕ್ಕೆ ದಂಡ ಹಾಕುತ್ತಾರೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.