ತೀವ್ರಸ್ವರೂಪ ಪಡೆದ ಬಿಪರ್‌ಜಾಯ್‌ ಚಂಡಮಾರುತ – ಕರ್ನಾಟಕದ ಕರಾವಳಿ ಭಾಗಗಳಲ್ಲಿ ಹೈ ವೇವ್ ಅಲರ್ಟ್ ಘೋಷಣೆ

ತೀವ್ರಸ್ವರೂಪ ಪಡೆದ ಬಿಪರ್‌ಜಾಯ್‌ ಚಂಡಮಾರುತ – ಕರ್ನಾಟಕದ ಕರಾವಳಿ ಭಾಗಗಳಲ್ಲಿ ಹೈ ವೇವ್ ಅಲರ್ಟ್ ಘೋಷಣೆ

ಕರ್ನಾಟಕದ ಕರಾವಳಿ ಭಾಗದಲ್ಲಿ ಬಿಪರ್ ಜಾಯ್ ಚಂಡಮಾರುತ ತೀವ್ರಸ್ವರೂಪ ಪಡೆಯುತ್ತಿದೆ. ಈ  ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಹೈ ವೇವ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಮುಂದಿನ 5 ದಿನ ಯಾವುದೇ ಕಾರಣಕ್ಕೂ ಸಮುದ್ರಕ್ಕಿಳಿಯದಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಬಿಪರ್‌ ಜಾಯ್‌ ಚಂಡಮಾರುತದ ಎಫೆಕ್ಟ್‌ – ಕಡಲ ತೀರಕ್ಕೆ ಅಪ್ಪಳಿಸುತ್ತಿವೆ ರಕ್ಕಸ ಅಲೆಗಳು

ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಅಲೆ ಏಳುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆಯು ಅಲರ್ಟ್ ಘೋಷಣೆ ಮಾಡಿದೆ. ಯಾವುದೇ ಕಾರಣಕ್ಕೂ ಮುಂದಿನ 5 ದಿನ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಸಮುದ್ರದ ಹತ್ತಿರ ಓಡಾಡುವುದು, ಆಟವಾಡುವುದು ಕೂಡಾ ನಿಷೇಧಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ದಕ್ಷಿಣಕನ್ನಡ ಜಿಲ್ಲೆಯು 42 ಕಿ.ಮೀ ಕರಾವಳಿ ತೀರ ಹೊಂದಿದೆ. ಪಶ್ಚಿಮ ಕರಾವಳಿಗೆ ಬಿಪರ್ ಜಾಯ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಲಾಗಿದ್ದು, ಸಮುದ್ರದ ಅಲೆಗಳ ಎತ್ತರ 3 ರಿಂದ 4 ಮೀ. ನಷ್ಟು ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಜೂನ್ 19 ರ ವರೆಗೂ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

suddiyaana