ನಂದಿನಿ ಮೊಸರಿನ ಪ್ಯಾಕೆಟ್ ಮೇಲೆ ಹಿಂದಿ ಪದ – ವಿರೋಧ, ಟೀಕೆ ಬೆನ್ನಲ್ಲೇ ಆದೇಶ ಹಿಂಪಡೆದ ಎಫ್‌ಎಸ್‌ಎಸ್‌ಎಐ

ನಂದಿನಿ ಮೊಸರಿನ ಪ್ಯಾಕೆಟ್ ಮೇಲೆ ಹಿಂದಿ ಪದ – ವಿರೋಧ, ಟೀಕೆ ಬೆನ್ನಲ್ಲೇ ಆದೇಶ ಹಿಂಪಡೆದ ಎಫ್‌ಎಸ್‌ಎಸ್‌ಎಐ

ಬೆಂಗಳೂರು: ನಂದಿನಿ ಮೊಸರಿನ ಪ್ಯಾಕ್ ಮೇಲೆ ‘ದಹಿ’ಎಂದು ಹಿಂದಿ ಪದ ಬಳಸಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಆದೇಶ ನೀಡಿತ್ತು. ಇದಕ್ಕೆ ಕರ್ನಾಟಕ,  ತಮಿಳುನಾಡಿನಾದ್ಯಂತ ಭಾರಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೀಗ ಎಫ್‌ಎಸ್‌ಎಸ್‌ಎಐ ತನ್ನ ಆದೇಶವನ್ನು ಹಿಂಪಡೆದುಕೊಂಡಿದೆ.

ಇದನ್ನೂ ಓದಿ: ನಂದಿನಿ ಮೊಸರಿನ ಪ್ಯಾಕೆಟ್ ಮೇಲೆ ಹಿಂದಿ ಪದ – ಕೇಂದ್ರದ ‘ದಹಿ’ ವಿರುದ್ದ ಸಿಡಿದೆದ್ದ ಹೆಚ್ ಡಿಕೆ

ಮೊಸರು ಪ್ಯಾಕೆಟ್ ಮೇಲೆ ‘ದಹಿ’ ಹಿಂದಿ ಪದ ನಮೂದಿಸಲಾಗಿತ್ತು. ಇದಕ್ಕೆ ಕರ್ನಾಟಕ, ತಮಿಳುನಾಡಿನಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು. ಹಲವೆಡೆ ಪ್ರತಿಭಟನೆಯೂ ನಡೆದಿತ್ತು. ಅಷ್ಟೇ ಅಲ್ಲದೇ ಜೆಡಿಎಸ್ ಮತ್ತು ಕಾಂಗ್ರೆಸ್‌ ಹಾಗೂ ಹಲವು ಕನ್ನಡ ಸಂಘಟನೆಗಳು ಆದೇಶ ವಾಪಸ್‌ ಪಡೆಯುವಂತೆ ಒತ್ತಾಯಿಸಿದ್ದವು. ಇದೀಗ ಎಫ್‌ಎಸ್‌ಎಸ್‌ಎಐ ತನ್ನ ಆದೇಶವನ್ನು ತಿದ್ದುಪಡಿ ಮಾಡಿದೆ. ಮೊಸರು ಪ್ಯಾಕೆಟ್ ಮೇಲೆ ಪ್ರಾದೇಶಿಕ ಭಾಷೆಗಳನ್ನು ಮುದ್ರಿಸಲು ಅವಕಾಶ ಕಲ್ಪಿಸಿದೆ. ಇಂಗ್ಲಿಷ್‌ ಜತೆ ಯಾವುದೇ ಪ್ರಾದೇಶಿಕ ಭಾಷೆಯನ್ನು ಬಳಸಬಹುದು ಅಂತಾ ಆದೇಶ ಹೊರಡಿಸಿದೆ.

ಮಾರ್ಚ್‌ 10ರಂದು ನಿರ್ದೇಶನ ನೀಡಿದ್ದ ಎಫ್‌ಎಸ್‌ಎಸ್‌ಎಐ, ‘ದಹಿ’ ಎನ್ನುವ ಶಬ್ದವನ್ನೇ ಬಳಸಬೇಕು. ಆವರಣದಲ್ಲಿ ಮಾತ್ರ ಪ್ರಾದೇಶಿಕ ಭಾಷೆಯನ್ನು ನಮೂದಿಸುವಂತೆ ಸೂಚಿಸಿತ್ತು.  ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಕೇಂದ್ರ ಸರ್ಕಾರದ ವಿರುದ್ದ ವಿರೋಧ ಪಕ್ಷದ ನಾಯರು ಕಿಡಿಕಾರಿದ್ದರು.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ಕೂಡ  ಎಫ್‌ಎಸ್‌ಎಸ್‌ಎಐ  ಆದೇಶದ ವಿರುದ್ಧ ಕಿಡಿಕಾರಿದ್ದರು. ನಮ್ಮ ರಾಜ್ಯಗಳಲ್ಲೇ ತಮಿಳು ಮತ್ತು ಕನ್ನಡವನ್ನು ನಿರ್ಲಕ್ಷಿಸಿ ಹಿಂದಿ ಬಳಸುವಂತೆ ಬಲವಂತದ ನಿರ್ದೇಶನ ನೀಡಲಾಗುತ್ತಿದೆ. ಇಂತಹ ನಿರ್ದೇಶನ ನೀಡಲು ಜವಾಬ್ದಾರಿಯಾಗಿರುವವರನ್ನು ಶಾಶ್ವತವಾಗಿಯೇ ದಕ್ಷಿಣದಿಂದ ನಿಷೇಧಿಸಲಾಗುವುದು’ ಎಂದು  ಹೇಳಿದ್ದರು.

suddiyaana