ಬೆಳಗಾವಿಯಲ್ಲಿ ಅಕ್ರಮ ಗೋಮಾಂಸ ಸಾಗಟ – ರೊಚ್ಚಿಗೆದ್ದ ಹಿಂದೂ ಕಾರ್ಯಕರ್ತರಿಂದ ಲಾರಿಗೆ ಬೆಂ*ಕಿ

ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಹಿಂದೂ ಕಾರ್ಯಕರ್ತರು ಬೆಂಕಿ ಇಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಬಳಿ ನಡೆದಿದೆ. ಗೋಮಾಂಸ ತುಂಬಿದ್ದ 4 ಲಾರಿಗಳು, ಕುಡಚಿ ಪಟ್ಟಣದಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದವು. 4 ವಾಹನಗಳನ್ನು ತಡೆದು ಪರಿಶೀಲಿಸಿದಾಗ ಗೋಮಾಂಸ ಸಾಗಾಟ ಬಯಲಾಗಿದೆ. ಇದರಿಂದ ರೊಚ್ಚಿಗೆದ್ದ ಹಿಂದೂ ಕಾರ್ಯಕರ್ತರು, ಗೋಮಾಂಸ ಸಮೇತ ಲಾರಿಗೆ ಬೆಂಕಿ ಇಟ್ಟು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ನಂದಿನಿ ದೇಸಿ ಹಾಲಿನ ಬೆಲೆ ದಿಢೀರ್ ಏರಿಕೆ – ಗ್ರಾಹಕರಿಗೆ ಕೆಎಂಎಫ್ ಶಾಕ್!
ನಾಲ್ಕು ಲಾರಿಗಳಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಹೀಗಾಗಿ ಪರಿಶೀಲಿಸಿದಾಗ KA71 2045 ನೋಂದಣಿ ಸಂಖ್ಯೆಯ ಲಾರಿಯಲ್ಲಿ 5 ಟನ್ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಭಾರಿ ಪ್ರಮಾಣದ ಗೋಮಾಂಸ ಕಂಡು ರೊಚ್ಚಿಗೆದ್ದ ಕಾರ್ಯಕರ್ತರು, ಲಾರಿಗೆ ಬೆಂಕಿ ಇಟ್ಟಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ಥಳಕ್ಕೆ ಅಥಣಿ ಡಿವೈಎಸ್ಪಿ, ಕಾಗವಾಡ ಪೊಲೀಸರು ಭೇಟಿ ನೀಡಿ, ಲಾರಿಯಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ಲಾರಿಯ ಬೆಂಕಿಯನ್ನ ಅಗ್ನಿಶಾಮಕ ದಳದ ಸಿಬ್ಬಂದಿ ನಂದಿಸಿದ್ದಾರೆ .ಇನ್ನು ಈ ಘಟನೆಗೆ ಸಂಬಂಧಿಸಿ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960ರ ಅಡಿ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಲ್ಲದೆ ಮಾಂಸವನ್ನು ಅಕ್ರಮವಾಗಿ ಸಾಗಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೋಡಿರಿ

