ನೇಪಾಳದ ವಿರುದ್ಧ ಪಂದ್ಯದಲ್ಲಿ ಅಬ್ಬರಿಸಿದ ಹಿಟ್‌ಮ್ಯಾನ್- ಒಂದೇ ಪಂದ್ಯದಲ್ಲಿ ರೋಹಿತ್ ಶರ್ಮಾ ದಾಖಲೆಗಳ ಸರದಾರ

ನೇಪಾಳದ ವಿರುದ್ಧ ಪಂದ್ಯದಲ್ಲಿ ಅಬ್ಬರಿಸಿದ ಹಿಟ್‌ಮ್ಯಾನ್- ಒಂದೇ ಪಂದ್ಯದಲ್ಲಿ ರೋಹಿತ್ ಶರ್ಮಾ ದಾಖಲೆಗಳ ಸರದಾರ

ಏಷ್ಯಾಕಪ್ 2023 ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡ ಸೂಪರ್-4 ಹಂತಕ್ಕೆ ಪ್ರವೇಶ ಪಡೆದಿದೆ. ಸೋಮವಾರ ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನೇಪಾಳ ವಿರುದ್ಧದ ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಟೀಮ್ ಇಂಡಿಯಾ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ನೇಪಾಳದ ವಿರುದ್ಧ ಘರ್ಜಿಸಿದ ಟೀಮ್ ಇಂಡಿಯಾದ ಹಿಟ್ ಮ್ಯಾನ್ ರೋಹಿತ್ ಶರ್ಮಾ ದಾಖಲೆಗಳ ಮೇಲೆ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: ವೈಯಕ್ತಿಕ ಕಾರಣ ನೀಡಿ ಏಷ್ಯಾಕಪ್ ಟೂರ್ನಿ ಬಿಟ್ಟು ತಾಯ್ನಾಡಿಗೆ ಬಂದ ಬುಮ್ರಾ – ಧೋನಿಯನ್ನು ಉದಾಹರಿಸಿ ಟೀಕಿಸಿದ ಕ್ರಿಕೆಟ್‌ ಪ್ರೇಮಿಗಳು!

ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಸಂಪೂರ್ಣ ವೈಫಲ್ಯ ಅನುಭವಿಸಿದ್ದರು. ಆದರೆ, ನೇಪಾಳ ವಿರುದ್ಧ ಹಾಫ್ ಸೆಂಚುರಿ ಸಿಡಿಸುವ ಮೂಲಕ ಹಿಟ್‌ಮ್ಯಾನ್ ಅಬ್ಬರಿಸಿದರು. ರೋಹಿತ್ ಶರ್ಮಾ ಕೇವಲ 59 ಎಸೆತಗಳಲ್ಲಿ 6 ಫೋರ್, 5 ಸಿಕ್ಸರ್‌ನೊಂದಿಗೆ ಅಜೇಯ 74 ರನ್ ಬಾರಿಸಿದ್ದಾರೆ. ಇದು ರೋಹಿತ್ ಅವರ 49 ನೇ ಏಕದಿನ ಅರ್ಧಶತಕವಾಗಿದೆ. ಇದರ ಜೊತೆಗೆ ರೋಹಿತ್ ಶರ್ಮಾ ಏಷ್ಯಾಕಪ್‌ನಲ್ಲಿ ಭಾರತ ಪರ ಹೆಚ್ಚು ರನ್ ಗಳಿಸಿದ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ರೋಹಿತ್, ಕೊಹ್ಲಿ ಅವರ 1046 ರನ್‌ಗಳ ಗಡಿ ದಾಟಿದರು. ಅಷ್ಟೇ ಅಲ್ಲದೆ, ಶ್ರೀಲಂಕಾದ ಶ್ರೇಷ್ಠ ಆಟಗಾರ ಕುಮಾರ ಸಂಗಕ್ಕಾರ ಅವರ 1075 ರನ್‌ಗಳ ದಾಖಲೆಯನ್ನೂ ಹಿಂದಿಕ್ಕಿ ಏಷ್ಯಾಕಪ್ ಟೂರ್ನಿಯ ಸಾರ್ವಕಾಲಿಕ ಬ್ಯಾಟಿಂಗ್ ಪಟ್ಟಿಯಲ್ಲಿ 2 ನೇ ಸ್ಥಾನಕ್ಕೆ ಏರಿದ್ದಾರೆ. ಇನ್ನು ಶ್ರೀಲಂಕಾದಲ್ಲಿ ಅತಿ ಹೆಚ್ಚಿನ ಸಿಕ್ಸರ್ , 29 ಸಿಕ್ಸರ್ ಸಿಡಿಸಿದ ಭಾರತೀಯ ಎಂಬ ದಾಖಲೆಯನ್ನು ರೋಹಿತ್ ಬರೆದಿದ್ದಾರೆ. ಅಲ್ಲದೆ ಏಷ್ಯಾಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಅರ್ಧಶತಕ ಸಿಡಿಸಿದ ದಾಖಲೆ ರೋಹಿತ್ ಶರ್ಮಾ ತನ್ನ ಹೆಸರಿಗೆ ಬರೆದುಕೊಂಡಿದ್ದಾರೆ.

suddiyaana