ದಕ್ಷಿಣ ಭಾರತದ ಮಲ್ಟಿಪ್ಲೆಕ್ಸ್ಗಳಲ್ಲಿ ‘ಸಲಾರ್’ ಬಿಡುಗಡೆ ಇಲ್ಲ! – ಕಾರಣವೇನು ಗೊತ್ತಾ?

ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಸಿನಿಮಾ ಸಲಾರ್. ಮೂರು ವರ್ಷದಿಂದ ಕಾಯುತ್ತಿದ್ದ ಗಳಿಗೆ ಹತ್ತಿರವಾಗಿದೆ. ಕಾರಣ ಸಲಾರ್ ಅಬ್ಬರಿಸಲು ಸಜ್ಜಾಗಿದೆ. ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದು ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ರಿಲೀಸ್ ಆಗಲಿದೆ. ಇದೀಗ ಸಲಾರ್ ರಿಲೀಸ್‌ಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಹೊಂಬಾಳೆ ಫಿಲ್ಮ್ಸ್ ಗೆ ಮಲ್ಟಿಪ್ಲೆಕ್ಸ್ನಿಂದ ಭಾರಿ ಅನ್ಯಾಯವಾಗಿದೆ. ಮಲ್ಟಿಪ್ಲೆಕ್ಸ್ಗಳ ತಾರತಮ್ಯದಿಂದ ಅಸಮಾಧಾನಗೊಂಡಿರುವ ಹೊಂಬಾಳೆ ಫಿಲ್ಮ್ಸ್ ದಕ್ಷಿಣ ಭಾರತದ ಮಲ್ಟಿಪ್ಲೆಕ್ಸ್ಗಳಲ್ಲಿ ಸಿನಿಮಾ ರಿಲೀಸ್ ಮಾಡಬಾರದು ಎಂದು ನಿರ್ಧಾರ ಮಾಡಿದೆ.
ಇದನ್ನೂ ಓದಿ:‘ಆಕಾಶ ಗಡಿಯ ದಾಟಿ ತಂದಾನು ಬೆಳಕು ಕೋಟಿ’ – ಅಭಿಮಾನಿಗಳ ಮನಗೆದ್ದ ಸಲಾರ್ ಸಾಂಗ್
ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯು ತಮ್ಮ ಬಹುಕೋಟಿ ಬಜೆಟ್ನ ‘ಸಲಾರ್’ಡಿ. 22 ರಂದು ರಿಲೀಸ್ ಆಗಲಿದೆ. ಪ್ರಭಾಸ್ ನಟನೆಯ ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಎರಡು ದೊಡ್ಡ ಚಿತ್ರಗಳು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಹಳಷ್ಟು ಏಕಪರದೆಯ ಚಿತ್ರಮಂದಿರಗಳು ಎರಡೂ ಚಿತ್ರಗಳನ್ನು ಎರಡೆರೆಡು ಪ್ರದರ್ಶನ ಮಾಡಬೇಕು ಎಂದು ತೀರ್ಮಾನಿಸಿದ್ದರು. ಆದರೆ, ‘ಡಂಕಿ’ ವಿತರಕರು ಮಾತ್ರ ತಮಗೆ ನಾಲ್ಕು ಪ್ರದರ್ಶನಗಳನ್ನು ಕೊಡುವುದಾದರೆ ಮಾತ್ರ ಚಿತ್ರವನ್ನು ಪ್ರದರ್ಶಿಸುವುದಕ್ಕೆ ಅನುಮತಿ ನೀಡಲಾಗುವುದು ಎಂದಿದ್ದರು. ಏಕಪರದೆಯ ಚಿತ್ರಮಂದಿರಗಳ ಸಂಘಗಳು ಎರಡೂ ಚಿತ್ರಗಳನ್ನು ಪ್ರದರ್ಶಿಸುವ ತೀರ್ಮಾನ ತೆಗೆದುಕೊಂಡ ಕಾರಣ, ‘ಡಂಕಿ’ ಸಿನಿಮಾದ ವಿತರಕರು ಮಲ್ಟಿಪ್ಲೆಕ್ಸ್ ನತ್ತ ವಾಲಿ, ಮಲ್ಟಿಪ್ಲೆಕ್ಸ್ಗಳಲ್ಲಿ ಹೆಚ್ಚಿನ ಪ್ರದರ್ಶನಗಳನ್ನು ಗಿಟ್ಟಿಸಿಕೊಂಡರು. ಪಿವಿಆರ್ – ಐನಾಕ್ಸ್ ಮತ್ತು ಮಿರಾಜ್ ಮಲ್ಟಿಪ್ಲೆಕ್ಸ್ ಗಳಲ್ಲಿ ‘ಸಲಾರ್’ಗಿಂತ ‘ಡಂಕಿ’ ಚಿತ್ರಕ್ಕೆ ಹೆಚ್ಚಿನ ಪ್ರದರ್ಶನಗಳನ್ನು ಕೊಡುವುದಕ್ಕೆ ಮಲ್ಟಿಪ್ಲೆಕ್ಸ್ ಗಳು ಒಪ್ಪಿಕೊಂಡಿದೆ. ಈ ಮೊದಲು ಎರಡೂ ಸಿನಿಮಾಗಳಿಗೆ 50:50 ಅನುಪಾತದಲ್ಲಿ ಸ್ಕ್ರೀನ್ಗಳನ್ನು ನೀಡುವ ಒಪ್ಪಂದವನ್ನು ಮಲ್ಟಿಪ್ಲೆಕ್ಸ್ ಮಾಡಿಕೊಂಡಿತ್ತು. ಆದರೆ ಬಳಿಕ ಈ ಒಪ್ಪಂದವನ್ನು ಮುರಿದಿದೆ. ಇದರಿಂದ ‘ಸಲಾರ್’ ಸಿನಿಮಾಕ್ಕೆ ಅನ್ಯಾಯವಾಗಿದೆ. ಮಲ್ಟಿಪ್ಲೆಕ್ಸ್ಗಳ ತಾರತಮ್ಯ ನೀತಿಗೆ ವಿರೋಧವಾಗಿ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯು ತಮ್ಮ ಬಹುಕೋಟಿ ಬಜೆಟ್ನ ‘ಸಲಾರ್’ ಸಿನಿಮಾವನ್ನು ದಕ್ಷಿಣ ಭಾರತದ ಮಲ್ಟಿಪ್ಲೆಕ್ಸ್ಗಳಲ್ಲಿ (ಪಿವಿಆರ್, ಐನಾಕ್ಸ್, ಮಿರಾಜ್) ಬಿಡುಗಡೆ ಮಾಡದೇ ಇರಲು ನಿರ್ಧಾರ ಮಾಡಿದೆ.
ತಮ್ಮ ಸಿನಿಮಾಕ್ಕೆ ಮಲ್ಟಿಪ್ಲೆಕ್ಸ್ನಿಂದ ಆಗುತ್ತಿರುವ ಅನ್ಯಾಯವನ್ನು ಖಂಡಿಸಿರುವ ಹೊಂಬಾಳೆ ಫಿಲಂಸ್, ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರವನ್ನು ದಕ್ಷಿಣ ಭಾರತದ ಪಿವಿಆರ್-ಇನಾಕ್ಸ್ ಮತ್ತು ಮಿರಾಜ್ ಮಲ್ಟಿಪ್ಲೆಕ್ಸ್ ಗಳಲ್ಲಿ ಬಿಡುಗಡೆ ಮಾಡದಿರುವುದಕ್ಕೆ ತೀರ್ಮಾನ ಮಾಡಿದೆ. ಮಿಕ್ಕಂತೆ ಬೇರೆ ಮಲ್ಟಿಪ್ಲೆಕ್ಸ್ ಚೈನ್‍ಗಳಾದ ಸಿನಿಪೊಲಿಸ್ ಮತ್ತು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ‘ಸಲಾರ್’ ಸಿನಿಮಾ ನಿಗದಿತ ದಿನದಂದು ಬಿಡುಗಡೆ ಆಗಲಿದೆ.
‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರದಲ್ಲಿ ಪ್ರಭಾಸ್ ಜೊತೆಗೆ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಪ್ರಶಾಂತ್ ನೀಲ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್‍ನಡಿ ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಿಸಿದ್ದಾರೆ.