ಆಶಾಕಾರ್ಯಕರ್ತೆಯರ ಗೌರವ ಧನ 1000 ರೂ. ಹೆಚ್ಚಳ
‘ಮನೆ ಮನೆಗೆ ಆರೋಗ್ಯ' ಆರೋಗ್ಯ ಶಿಬಿರ
ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರು, ಗ್ರಂಥ ಪಾಲಕರ ಗೌರವಧನ 1000 ರೂ. ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕಾಗಿ 775 ಕೋಟಿ ರೂ. ಅನುದಾನ ಹೆಚ್ಚಳ ಮಾಡಲಾಗಿದೆ.
‘ಮನೆ ಮನೆಗೆ ಆರೋಗ್ಯ’ ಎಂಬ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಗ್ರಾಮೀಣ ಜನತೆಗೆ 2023-24ನೇ ಸಾಲಿನಲ್ಲಿ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಯೋಜಿಸಲಾಗುವುದು. ಇದರಿಂದ ತೀವ್ರವಾದ ಕಾಯಿಲೆಗಳನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಜನರ ಆರೋಗ್ಯ ಕಾಪಾಡುವ ಗುರಿ ಹೊಂದಲಾಗಿದೆ. ಇದರೊಂದಿಗೆ ಈ ಯೋಜನೆಯಡಿ ದೀರ್ಘಕಾಲಿಕ ಕಾಯಿಲೆಗಳಿಂದ ಬಳಲುತ್ತಿರುವವರ ಮನೆ ಬಾಗಿಲಿಗೆ ಔಷಧಿಗಳನ್ನು ಕ್ರಮವಹಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ.