ಮೇಲುಕೋಟೆ ಜಾತ್ರೆಯಲ್ಲಿ ಹೆಜ್ಜೇನು ದಾಳಿ- 30ಕ್ಕೂ ಹೆಚ್ಚು ಭಕ್ತರಿಗೆ ಗಾಯ, 17 ಮಂದಿ ಸ್ಥಿತಿ ಗಂಭೀರ

ಮೇಲುಕೋಟೆಯ ತೊಟ್ಟಿಲುಮಡು ಜಾತ್ರೆಯ ಹೆಜ್ಜೇನು ದಾಳಿ ನಡೆಸಿದೆ. ಹೆಜ್ಜೇನು ದಾಳಿಯಲ್ಲಿ 30ಕ್ಕೂ ಅಧಿಕ ಭಕ್ತರು ಗಾಯಗೊಂಡಿದ್ದು, 17 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ದಂಪತಿಗಳ ಅಪೇಕ್ಷೆಯಂತೆ ಮಕ್ಕಳಭಾಗ್ಯ ಕರುಣಿಸುವ ಚೆಲುವನಾರಾಯಣಸ್ವಾಮಿಯ ‘ತೊಟ್ಟಿಲಮಡು ಜಾತ್ರೆ’ ಎಂದೇ ಪ್ರಖ್ಯಾತವಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಬುಧವಾರ ಮೇಲುಕೋಟೆ ಅಷ್ಠತೀರ್ಥೋತ್ಸವ ನಡೆದಿದೆ. ಈ ಜಾತ್ರೆಯಲ್ಲಿ ಭಾಗವಹಿಸಲು ಸಾವಿರಾರು ಭಕ್ತರು ಆಗಮಿಸಿದ್ದರು. ಅಷ್ಟತೀರ್ಥೋತ್ಸವದ ವೇಳೆ ಜೇನುಗೂಡಿದ್ದ ಮರದ ಸಮೀಪವೇ ಭಕ್ತರು ಕರ್ಪೂರ ಹಚ್ಚಿದ್ದಾರೆ. ಕರ್ಪೂರದ ಹೊಗೆಯಿಂದ ಹೆಜ್ಜೇನು ದಾಳಿ ನಡೆಸಿವೆ. ಇದರಿಂದ ಭಕ್ತರು ದಿಕ್ಕಾಪಾಲಾಗಿ ಓಡಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 17 ಮಂದಿಯ ಸ್ಥಿತಿ ಗಂಭೀರವಾಗಿದೆ.
ಜೇನು ದಾಳಿಗೆ ಒಳಗಾದವರನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಗಂಭೀರವಾಗಿ ಗಾಯಗೊಂಡ 17 ಮಂದಿಯನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದು, ತೀವ್ರ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.