ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದ ಜನರಿಗೆ ಮತ್ತೊಂದು ಶಾಕ್ – ಹೋಟೆಲ್ ದರ ಗಗನಕ್ಕೆ

ರಾಜ್ಯ ಸರ್ಕಾರ ಹಾಲಿನ ದರ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಿದ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್ ಎದುರಾಗಿದೆ. ಹಾಲಿನ ದರ ಏರಿಕೆಯಿಂದ ಇದೀಗ ಹೊಟೆಲ್ ತಿನಿಸುಗಳ ಬೆಲೆ ಅನಿವಾರ್ಯವಾಗಿ ಏರಿಕೆಯಾಗುತ್ತಿದೆ. ಹೋಟೆಲ್ ಮಾಲೀಕರು ಈ ಕುರಿತು ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದಾರೆ.
ವಿದ್ಯುತ್, ಪ್ರಯಾಣ, ಹಾಲಿನ ದರ ಏರಿಕೆಯಿಂದ ಹೋಟೆಲ್ ಉದ್ಯಮಕ್ಕೆ ನಷ್ಟವಾಗುತ್ತಿದೆ. ಹೀಗಾಗಿ ನಷ್ಟ ಸರಿದೂಗಿಸಲು ಇದೀಗ ತಿನಿಸುಗಳ ಬೆಲೆ ಏರಿಕೆ ಅನಿವಾರ್ಯ ಎಂದು ಹೋಟೆಲ್ ಮಾಲೀಕರು ಹೇಳಿದ್ದಾರೆ. ನಂದಿನ ಹಾಲು, ಮೊಸರು ದರ ಪರಿಷ್ಕರಣೆಯಿಂದ ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಸರ್ಕಾರದ ಈ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರು ಹೋಟೆಲ್ ಮಾಲೀಕರು ಇದೀಗ ಕಾಫಿ, ತಿಂಡಿ, ಊಟ ಸೇರಿದಂತೆ ಹೋಟೆಲ್ ತಿನಿಸುಗಳ ಬೆಲೆ ಏರಿಕೆಗೆ ಮುಂದಾಗಿದ್ದಾರೆ.
ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಪ್ರತಿ ಲೀಟರ್ ಹಾಲು,ಮೊಸರಿಗೆ 4 ರೂ ಏರಿಕೆ ಮಾಡಲಾಗಿದೆ. ಇದರ ಜೊತೆಗೆ ಪ್ರತಿ ಯೂನಿಟ್ 36 ಪೈಸೆ ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಇದು ನೇರವಾಗಿ ಹೋಟೆಲ್ ಉದ್ಯಮದ ಮೇಲೆ ಹೊಡೆತ ನೀಡುತ್ತಿದೆ. ವಿದ್ಯುತ್ ಹಾಗೂ ಹಾಲು ಹೋಟೆಲ್ ಉದ್ಯಮದ ಜೀವಾಳ. ಆದರೆ ಇವರೆರಡ ಬೆಲೆ ಏರಿಕೆ ಹೋಟೆಲ್ ಉದ್ಯಮವನ್ನು ಮತ್ತಷ್ಟು ನಷ್ಟಕ್ಕ ದೂಡಲಿದೆ ಅನ್ನೋ ಆತಂಕವನ್ನು ಹೋಟೆಲ್ ಮಾಲೀಕರು ವ್ಯಕ್ತಪಡಿಸಿದ್ದಾರೆ.