ಗೆಲುವಿನತ್ತ ಬಿಜೆಪಿ ದಾಪುಗಾಲು – ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿದೆ ಹೌಸ್ ದ ಜೋಶ್
ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿಯುವ ಹಂತಕ್ಕೆ ತಲುಪಿದೆ. ಮತ ಎಣಿಕೆಯಲ್ಲಿ ಈಗಾಗಲೇ ಬಿಜೆಪಿ ಮನ್ನಡೆ ಸಾಧಿಸುತ್ತಿದ್ದು, ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಯ ಸಿದ್ದತೆಯಲ್ಲಿ ತೊಡಗಿದ್ದಾರೆ. ಇದರ ನಡುವೆ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿರುವುದರಿಂದ ಟ್ವಿಟ್ಟರ್ ನಲ್ಲಿ ಹೌಸ್ ದ ಜೋಶ್ ಎಂಬ ಸಿನಿಮಾ ಹೆಸರು ಟ್ರೆಂಡ್ ಆಗುತ್ತಿದೆ.
ಇದನ್ನೂ ಓದಿ: ಹಿಮಾಚಲ ಪ್ರದೇಶ ಫಲಿತಾಂಶ- ಸತತ ಆರನೇ ಬಾರಿ ಗೆದ್ದ ಮುಖ್ಯಮಂತ್ರಿ ಜೈರಾಮ್ ಠಾಕೂರ್
ಈಗಾಗಲೇ ಗಾಂಧಿನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಆಪ್ ಗೆ ಭಾರಿ ಮುಖಭಂಗವಾಗುತ್ತಿದೆ. ಟ್ವಿಟ್ಟರ್ನ ಕೆಲವು ಪೋಸ್ಟ್ಗಳಲ್ಲಿ ಅರವಿಂದ್ ಕೇಜ್ರಿವಾಲ್ ವ್ಯಂಗ್ಯ ಚಿತ್ರಗಳು ಹರಿದಾಡುತ್ತಿವೆ.
Aur bhai @AAPGujarat 😂😂😂😂😂 #GujaratElections #GujaratElectionResult pic.twitter.com/HRiB6aphB1
— 🇮🇳 (@abyjyth) December 8, 2022
ಗುಜರಾತ್ನಲ್ಲಿ ಬಿಜೆಪಿಯು ನಿಚ್ಚಳ ಬಹುಮತದತ್ತ ದಾಪುಗಾಲು ಹಾಕುತ್ತಿದೆ. ಆದರೆ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಹಲವು ಕ್ಷೇತ್ರಗಳಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಕಂಡುಬಂದಿದೆ.