ಇನ್ನೂ ಮುಗಿದಿಲ್ಲ ಮಳೆ ಆರ್ಭಟ- ರಾಜ್ಯದಲ್ಲಿ ಇನ್ನೆಷ್ಟು ದಿನ ಅಬ್ಬರಿಸಲಿದೆ ಮಳೆ?

ಕರ್ನಾಟಕದಾದ್ಯಂತ ಅಲ್ಲಲ್ಲಿ ಜೋರು ಮಳೆ ಆಗುತ್ತಿದೆ. ಕರಾವಳಿಯಿಂದ ಹಿಡಿದು ಪಶ್ಚಿಮ ಘಟ್ಟಗಳು ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳವರೆಗೆ ವಿವಿಧೆಡೆ ಭಾರೀ ಮಳೆ ಆಗುತ್ತಿದೆ. ಮೇ 26ರ ರವರಿಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ MIಗೆ ಭರ್ಜರಿ ಜಯ – ಪ್ಲೇಆಫ್ಸ್‌ಗೇರಿದ ಮುಂಬೈ ಇಂಡಿಯನ್ಸ್!
ರಾಜ್ಯಾದ್ಯಂತ ಇಂದು ಹಲವು ಕಡೆ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದರೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್ ಜಾರಿಯಾಗಿದ್ದು ಗಾಳಿ ಸಹಿತ ಮಳೆಯಾಗಲಿದೆ. ಗಂಟೆಗೆ 40 – 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.