ಇಂಡಿಗೋ ವಿಮಾನಗಳ ಹಾರಾಟ ರದ್ದು – ತಮ್ಮದೇ ಆರತಕ್ಷತೆಗೆ ಆನ್‌ಲೈನ್‌ನಲ್ಲಿ ಭಾಗಿಯಾದ ವಧು, ವರ!

ಇಂಡಿಗೋ ವಿಮಾನಗಳ ಹಾರಾಟ ರದ್ದು – ತಮ್ಮದೇ ಆರತಕ್ಷತೆಗೆ ಆನ್‌ಲೈನ್‌ನಲ್ಲಿ ಭಾಗಿಯಾದ ವಧು, ವರ!

ಎಲ್ಲವೂ ಅಂದುಕೊಂಡಂತೆ ಆಗಿದ್ರೆ, ನಿನ್ನೆ ನವ ಜೋಡಿ ಆರತಕ್ಷತೆಯಲ್ಲಿ ಭಾಗಿಯಾಗಬೇಕಿತ್ತು. ಕುಟುಂಬಸ್ಥರ ಜೊತೆ ಸಂತಸದ ಕ್ಷಣವನ್ನ ಸವಿಯಬೇಕಿತ್ತು. ಆದ್ರೆ ಇಂಡಿಗೋ ವಿಮಾನಯಾನ ಸಂಸ್ಥೆಯಿಂದಾಗಿ ಎಲ್ಲ ಪ್ಲ್ಯಾನ್‌ ಉಲ್ಟಾ ಆಗಿದೆ. ಸಮಾರಂಭದಲ್ಲಿ ಭಾಗಿಯಾಗಬೇಕಿದ್ದ ನವ ಜೋಡಿ ಆನ್‌ಲೈನ್‌ನಲ್ಲಿ ಕಾರ್ಯಕ್ರಮ ನಡೆಸುವಂತಾಗಿದೆ.

ಇದನ್ನೂ ಓದಿ: ರಕ್ಷಿತಾಗೆ ಅತಿರೇಕದ ವರ್ತನೆಯೇ ಮುಳುವಾಯ್ತಾ? – ಬ್ಯಾಕ್‌ ಟು ಬ್ಯಾಕ್‌ ಎಡವಟ್ಟು.. ಈ ವಾರ ಕಳಪೆ ಫಿಕ್ಸ್?‌

ಅಷ್ಟಕ್ಕೂ ಆಗಿದ್ದೇನು?

ಮೇಧಾ ಕ್ಷೀರಸಾಗರ ಹಾಗೂ ಸಂಗಮ ದಾಸ್ ನವೆಂಬರ್ 23ರಂದು ಭುವನೇಶ್ವರದಲ್ಲಿ ಮದುವೆಯಾಗಿದ್ದರು. ಡಿಸೆಂಬರ್‌ 3 ರಂದು ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಈ ಜೋಡಿಯ ಆರತಕ್ಷತೆಗೆ ನಡೆಸಲು ಪ್ಲ್ಯಾನ್‌ ಮಾಡಲಾಗಿತ್ತು. ಈ ಹಿನ್ನೆಲೆ ಈ ಜೋಡಿ, ಬೆಂಗಳೂರಿಗೆ ಆಗಮಿಸಿ ಅಲ್ಲಿಂದ ಹುಬ್ಬಳ್ಳಿಗೆ ಬರಲು ಡಿಸೆಂಬರ್ 2ರ ವಿಮಾನ ಬುಕ್ ಮಾಡಿದ್ದರು. ಕೆಲ ಸಂಬಂಧಿಕರು ಭುವನೇಶ್ವರ–ಮುಂಬೈ–ಹುಬ್ಬಳ್ಳಿ ಮಾರ್ಗದಲ್ಲಿ ವಿಮಾನ ಟಿಕೆಟ್ ಬುಕ್ ಮಾಡಿದ್ದರು. ಆದ್ರೆ ಕಡೇ ಕ್ಷಣದಲ್ಲಿ ಇಂಡಿಗೋ ವಿಮಾನ ಹಾರಾಟ ರದ್ಧಾಗಿದೆ.

ಡಿಸೆಂಬರ್ 2ರ ಬೆಳಗ್ಗೆ 9ರಿಂದ ಇಂಡಿಗೋ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ. ಅನೇಕ ವಿಮಾನಗಳ ಸಂಚಾರ ರದ್ದಾಗಿದೆ. ಭುವನೇಶ್ವರದಿಂದ ಮೇಧಾ ಕ್ಷೀರಸಾಗರ ಹಾಗೂ ಸಂಗಮ ದಾಸ್ ಪ್ರಯಾಣಿಸಬೇಕಿದ್ದ ವಿಮಾನ ಸಂಚಾರ ಮುಂದಿನ ದಿನ (ಡಿ.3) ಬೆಳಗಿನ 4–5 ಗಂಟೆಗಳವರೆಗೆ ವಿಳಂಬವಾಗುವ ಸಂದೇಶ ಬಂದಿತ್ತು. ಹೀಗಾಗಿ ಅವರು ಪರ್ಯಾಯ ಪ್ರಯಾಣಕ್ಕೆ ಯೋಚಿಸಿರಲಿಲ್ಲ. ಆದರೆ, ಕೊನೇ ಕ್ಷಣದಲ್ಲಿ ಏಕಾಏಕಿ ಡಿಸೆಂಬರ್ 3ರಂದು ಬೆಳಗ್ಗೆ ವಿಮಾನ ಸಂಚಾರವೇ ರದ್ದಾಯಿತು. ಪರಿಣಾಮವಾಗಿ ವಧು-ವರರು ಹುಬ್ಬಳ್ಳಿಗೆ ಆರಕ್ಷತೆ ವೇಳೆಗೆ ತಲುಪಲು ಸಾಧ್ಯವಾಗಲಿಲ್ಲ. ಆದ್ರೆ ಗುಜರಾತ್ ಭವನದಲ್ಲಿ ಆರತಕ್ಷತೆಯ ಎಲ್ಲಾ ಸಿದ್ಧತೆಗಳೂ ಪೂರ್ಣಗೊಂಡಿದ್ದರಿಂದ, ಕುಟುಂಬಸ್ಥರು ಹೊಸ ಪ್ಲ್ಯಾನ್‌ ಮಾಡಿದ್ದಾರೆ. ಕೊನೆಗೆ ವಧುವಿನ ತಂದೆ-ತಾಯಿ ತಮ್ಮ ಮಗಳು ಹಾಗೂ ಅಳಿಯನ ಬದಲು ವಧು-ವರರ ಕುರ್ಚಿಯಲ್ಲಿ ಕುಳಿತು ಶಾಸ್ತ್ರಗಳನ್ನು ನಡೆಸಿದ್ದಾರೆ. ವಧು ಮೇಧಾ ಮತ್ತು ವರ ಸಂಗಮ ದಾಸ್ ಇಬ್ಬರೂ ಭುವನೇಶ್ವರದಲ್ಲೇ ಸಿದ್ಧರಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರತಕ್ಷತೆಯಲ್ಲಿ ಭಾಗವಹಿಸಿದ್ದಾರೆ.

Shwetha M