ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತಕ್ಕೆ ಮೂವರು ಬಲಿ! – ಮಣ್ಣಿನಡಿ ಸಿಲುಕಿದ್ದ ಕಾರ್ಮಿಕರ ಮೃತದೇಹಗಳು ಪತ್ತೆ

ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹುಲಿಕಲ್ ಘಾಟ್ನಲ್ಲಿ (ಬಾಳೆಬರೆ ಘಾಟಿ) ದುರಂತ ಘಟನೆಯೊಂದು ನಡೆದು ಹೋಗಿದೆ. ಹುಲಿಕಲ್ ಘಾಟಿಯಲ್ಲಿ ರಸ್ತೆ ಅಗಲೀಕರಣ ವೇಳೆ ಭೂಕುಸಿತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, ಕಾರ್ಮಿಕರ ಮೃತದೇಹ ಪತ್ತೆಯಾಗಿದೆ.
ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಮುಕುಲ್ ಕಮಾಲ್! – ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್ ಜಯ!
ಮಲೆನಾಡು ಮತ್ತು ಕರಾವಳಿ ಸಂಪರ್ಕ ಸಾಧಿಸಲು ಪ್ರಮುಖ ಮಾರ್ಗವಾಗಿರುವ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯ ಶ್ರೀ ಚಂಡಿಕಾಂಬ ದೇವಸ್ಥಾನದ ಬಳಿ ಇರುವ ಹೇರ್ಪಿನ್ ತಿರುವಿನಲ್ಲಿ ಮಣ್ಣು ಕುಸಿಯುತ್ತಿತ್ತು. ಈ ಹಿನ್ನೆಲೆ ರಸ್ತೆ ರಿಪೇರಿ ಕಾಮಗಾರಿ ನಡೆಸಲಾಗುತ್ತಿತ್ತು, ಆದರೆ ದುರಾದೃಷ್ಟವಶಾತ್, ನಿನ್ನೆ ಆರು ಗಂಟೆ ಸುಮಾರಿಗೆ ಏಕಾಏಕಿ ಭೂಕುಸಿತ ಉಂಟಾಗಿದ್ದು, ಮೂವರು ಕಾರ್ಮಿಕರು ಮಣ್ಣಿನಡಿಗೆ ಬಿದ್ದು ಪ್ರಾಣಕಳೆದುಕೊಂಡಿದ್ದಾರೆ. ಮೃತದೇಹ ನಿನ್ನೆ ರಾತ್ರಿಯಿಡಿ ಕಾರ್ಯಾಚರಣೆ ಮಾಡಲಾಗಿದ್ದು, ಎಲ್ಲಾ ಕಾರ್ಮಿಕರ ಮೃತದೇಹ ಪತ್ತೆಯಾಗಿದೆ.
ಈ ಅವಘಡದಲ್ಲಿ ಕಾಮಗಾರಿ ಮೇಲ್ವಿಚಾರಕ ಚಕ್ಕಾರು ಗ್ರಾಮದ ರಾಘು (37), ಹಾವೇರಿ ಜಿಲ್ಲೆಯ ನೆಲಗಲು ಗ್ರಾಮದ ರಾಜು (30) ಕಾರ್ಮಿಕ ಶಬ್ಬೀರ್ (40) ಮೃತಪಟ್ಟ ದುರ್ದೈವಿಗಳು. ಮೂರು ಮೃತದೇಹಗಳನ್ನು ನಗರದ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ದುರಂತದಲ್ಲಿ ಗಾಯಗೊಂಡ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳದಲ್ಲಿ ಎಸ್ಡಿಆರ್ಎಫ್, ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ನಡೆಸುತ್ತಿದ್ದ ರಕ್ಷಣಾ ಕಾರ್ಯ ಅಂತ್ಯಗೊಂಡಿದೆ.

ನೋಡಿರಿ

