ಜಾತ್ರೆಗೆ ಹೋದ ಮದುಮಗ ದುರಂತ ಅಂತ್ಯ! – ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್ ಹರಿದು ಯುವಕ ಸಾವು!

ಈತ ಮದುವೆಯಾಗುವ ಖುಷಿಯಲ್ಲಿದ್ದ. ಮದುವೆ ಅನ್ನೋ ಸಂಭ್ರಮದಿಂದಲೇ ನೆಂಟರಿಷ್ಟರಿಗೆ ಮದುವೆ ಕಾರ್ಡ್ ನೀಡಲು ಹೊರಟಿದ್ದ. ಆದ್ರೆ ಅದ್ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ಹಸೆಮಣೆ ಏರಬೇಕಿದ್ದ ಯುವಕ ದುರಂತ ಅಂತ್ಯ ಕಂಡಿದ್ದಾನೆ. ಜಾತ್ರೆಗೆ ಹೋದಾತ ಹೆಣವಾಗಿ ಬಂದಿದ್ದಾನೆ.
ಇದನ್ನೂ ಓದಿ: RCB Vs RR.. ರಿಯಲ್ ಚಾಲೆಂಜ್ – ಮೊದಲ ಸೋಲು ಯಾರಿಗೆ?
ಈ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವದ ವೇಳೆ ನಡೆದಿದೆ. ಅಕ್ಷತ್ (27) ಯುವಕ.
ಬನಶಂಕರಿ ನಿವಾಸಿಯಾಗಿರುವ ಅಕ್ಷತ್ಗೆ ಮದುವೆ ನಿಶ್ಚಯವಾಗಿತ್ತು. ಹೀಗಾಗಿ ಅಕ್ಷಯ್ ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಮದುವೆಯ ಅಹ್ವಾನ ಪತ್ರಿಕೆ ವಿತರಿಸಲೆಂದು ಬಂದಿದ್ದರು. ಹಾಗೆ ಜಾತ್ರೆಯನ್ನೂ ನೋಡಿ ಹೋಗೊಣ ಎಂದು ಅಲ್ಲಿಯೇ ಉಳಿದುಕೊಂಡಿದ್ದರು ಎನ್ನಲಾಗಿದೆ. ನಿನ್ನೆ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಅಕ್ಷಯ್ ಮೇಲೆ ಟ್ರ್ಯಾಕ್ಟರ್ ಹರಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಅಕ್ಷಯ್ನ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಉಸಿರು ಚೆಲ್ಲಿದ್ದಾರೆ.
ಇನ್ನು ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯಿಂದಲೇ ಅಪಘಾತ ನಡೆದಿದೆ ಎನ್ನಲಾಗಿದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಹುಳಿಮಾವು ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು, ಸ್ಥಳಕ್ಕೆ ಬೆಂಗಳೂರು ದಕ್ಷಿಣ ಸಂಚಾರ ಡಿಸಿಪಿ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರ್ಘಟನೆ ನಡೆದು ಓರ್ವ ಮೃತಪಟ್ಟಿದ್ದರೂ ದೇವಾಲಯದ ಟ್ರಸ್ಟಿಗಳು ಸ್ಥಳಕ್ಕೆ ಬಂದಿಲ್ಲ ಎನ್ನಲಾಗಿದೆ.

ನೋಡಿರಿ

