ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ – 28 ದಿನಗಳಲ್ಲಿ ಕೋಟ್ಯಧಿಪತಿಯಾದ ಮಾದಪ್ಪ!
ಪ್ರಸಿದ್ಧ ಯಾತ್ರಸ್ಥಳಗಳಲ್ಲಿ ಒಂದಾದ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಸುಮಾರು 28 ದಿನಗಳ ಅವಧಿಯಲ್ಲಿ 2.10 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಮತ್ತೊಮ್ಮೆ ಮಾದಪ್ಪ ಕೋಟ್ಯಧಿಪತಿಯಾಗಿದ್ದಾನೆ.
ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭೇಟಿ ನೀಡುತ್ತಿದ್ದಾರೆ. ಜೊತೆಗೆ ಹುಣ್ಣಿಮೆ, ಅಮಾವಾಸ್ಯೆ, ಹಾಗೂ ಸರ್ಕಾರಿ ರಜೆ ದಿನಗಳು, ಸಾಮೂಹಿಕ ವಿವಾಹ, ಕಾರ್ಯಕ್ರಮಕ್ಕೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ದೇಗುಲದ ಆದಾಯದಲ್ಲಿ ಭಾರಿ ಹೆಚ್ಚಳವಾಗಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್! – ಖಾಸಗಿ ಬಸ್ ಟಿಕೆಟ್ ದರ ಶೇ. 30 ರಷ್ಟು ಹೆಚ್ಚಳ!
ಹರಕೆಯ ರೂಪದಲ್ಲಿ ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಮಾದಪ್ಪನ ಭಕ್ತರು ಕಾಣಿಕೆಯ ರೂಪದಲ್ಲಿ ಹಾಕಿದ್ದಾರೆ. ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,10,78,014 ರು. ಸಂಗ್ರಹವಾಗಿದೆ.ಲೋಹದ ಮೌಲ್ಯಮಾಪಕರಿಗೆ ಅನಾರೋಗ್ಯದ ಹಿನ್ನೆಲೆ ಚಿನ್ನ ಮತ್ತು ಬೆಳ್ಳಿಯನ್ನು ಶೇಖರಿಸಿ ಇಡಲಾಗಿದೆ. ಎಂದು ವರದಿಯಾಗಿದೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹದೇಶ್ವರಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಎಣಿಕೆ ಮಾಡಲಾಗಿದೆ. ಸಾಲೂರು ಬೃಹನ್ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಹುಂಡಿ ಎಣಿಕೆ ಮಾಡಲಾಗಿದೆ.