ಪ್ರಜ್ವಲ್‌ ರೇವಣ್ಣ ವಿಡಿಯೋ ರಿಲೀಸ್‌ ಮಾಡಿದ್ದು ಎಲ್ಲಿಂದ? – ಸಿಕ್ಕೇ ಬಿಡ್ತು ಮಹತ್ವದ ಮಾಹಿತಿ!

ಪ್ರಜ್ವಲ್‌ ರೇವಣ್ಣ ವಿಡಿಯೋ ರಿಲೀಸ್‌ ಮಾಡಿದ್ದು ಎಲ್ಲಿಂದ? – ಸಿಕ್ಕೇ ಬಿಡ್ತು ಮಹತ್ವದ ಮಾಹಿತಿ!

ಹಾಸನ ಪೆನ್‌ಡ್ರೈವ್‌ ಕೇಸ್‌ ಆರೋಪಿ ಪ್ರಜ್ವಲ್‌ ರೇವಣ್ಣ ಶುಕ್ರವಾರ ಭಾರತಕ್ಕೆ ವಾಪಸ್‌ ಬರುತ್ತೇನೆ ಅಂತಾ ವಿಡಿಯೋ ಮೂಲಕ ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಫುಲ್‌ ಅಲರ್ಟ್‌ ಆಗಿದ್ದಾರೆ. ಇದೀಗ ಈ ಕೇಸ್‌ಗೆ ಸಂಬಂಧಿಸಿದಂತೆ ಮಹತ್ವದ ದಾಖಲೆ ಸಂಗ್ರಹಿಸಲು ಎಸ್‌ಐಟಿ ಮುಂದಾಗಿದೆ.

ಇದನ್ನೂ ಓದಿ: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ – ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ

ಹಾಸನದ  ಆರ್.ಸಿ. ರಸ್ತೆಯಲ್ಲಿರುವ ಪ್ರಜ್ವಲ್‌ ನಿವಾಸದಲ್ಲಿ ಸತತ 10 ಗಂಟೆಗಳ ಕಾಲ ಎಸ್‌ಐಟಿ ಹಾಗೂ ಎಫ್‌ಎಸ್‌ಎಲ್ ತಂಡ ಪರಿಶೀಲನೆ ನಡೆಸಿದೆ. ಪ್ರಜ್ವಲ್​ ರೇವಣ್ಣ ಮನೆಯಲ್ಲಿ ವಿವಿಧ ಕಡೆ ಬೆರಳಚ್ಚು ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ಪ್ರಜ್ವಲ್​ ರೇವಣ್ಣ ಮಲಗುವ ಕೊಠಡಿಯಲ್ಲಿನ ಹಾಸಿಗೆ, ದಿಂಬು, ಹೊದಿಕೆ ಸೇರಿದಂತೆ ಇತರೆ ವಸ್ತುಗಳನ್ನು ಎಸ್​ಐಟಿ, ಎಫ್​ಎಸ್​​ಎಲ್​​ ತಂಡ ತೆಗೆದುಕೊಂಡು ಹೋಗಿದೆ.

ವಿಡಿಯೋ ಬಿಡುಗಡೆ ಮಾಡಿದ್ದು ಎಲ್ಲಿಂದ?

ಕಳೆದ ಎರಡು ದಿನಗಳ ಹಿಂದೆ ತಾನು ಭಾರತಕ್ಕೆ ಬರೋದಾಗಿ ಹೇಳಿರುವ ವಿಡಿಯೋವೊಂದನ್ನು ಪ್ರಜ್ವಲ್‌ ರೇವಣ್ಣ ರಿಲೀಸ್‌ ಮಾಡಿದ್ರು.. ಇದೀಗ ಈ ವಿಡಿಯೋ ಮಾಡಿರುವ ಸ್ಥಳವನ್ನು ಎಸ್​ಐಟಿ ಪತ್ತೆ ಮಾಡಿದೆ. ಯೂರೋಪ್​​ನ ಹಂಗೇರಿಯ ಬುಡಾಪೆಸ್ಟ್​​ನಿಂದ ಪ್ರಜ್ವಲ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ವಿಡಿಯೋ ರಿಲೀಸ್ ಆದ ಮೊಬೈಲ್ ಐಪಿ ಅಡ್ರೆಸ್ ಟ್ರೇಸ್ ಮಾಡುವ ಮೂಲಕ ಎಸ್​​ಐಟಿ ಈ ಮಾಹಿತಿ ಕಲೆ ಹಾಕಿದೆ. ವಿಡಿಯೋ ಹೇಳಿಕೆ ಬಿಡುಗಡೆಗೂ ಎರಡು ದಿನ ಮೊದಲೇ ರೆಕಾರ್ಡ್​ ಆಗಿತ್ತು ಎಂಬುದನ್ನೂ ಎಸ್​ಐಟಿಯ ಟೆಕ್ನಿಕಲ್ ಟೀಮ್ ಪತ್ತೆ ಮಾಡಿದೆ.

Shwetha M