ಗರ್ಭಿಣಿ ಪ*ತ್ನಿಗೆ ಚಾಕು ಇರಿದು ಬಾವಿಗೆ ಹಾರಿದ ಪತಿ ಸಾ*ವು – ಇರಿತಕ್ಕೊಳಗಾದ ಹೆಂಡತಿ ಸೇಫ್

ಗರ್ಭಿಣಿ ಪ*ತ್ನಿಗೆ ಚಾಕು ಇರಿದು ಬಾವಿಗೆ ಹಾರಿದ ಪತಿ ಸಾ*ವು – ಇರಿತಕ್ಕೊಳಗಾದ ಹೆಂಡತಿ ಸೇಫ್

ಗರ್ಭಿಣಿ ಪತ್ನಿಗೆ ಚಾಕು ಇರಿದು ಬಳಿಕ ಬಾವಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ. ರಾಮದುರ್ಗ ಪಟ್ಟಣದ ನಿವಾಸಿ ಉಮೇಶ ಬಡಿಗೇರ (34) ಮೃತ ದುರ್ದೈವಿ. ಕ್ಷುಲ್ಲಕ ಕಾರಣಕ್ಕೆ ಪತ್ನಿ ಜೊತೆ ಉಮೇಶ ಸಾರಾಯಿ ಕುಡಿದು ಬಂದು ಜಗಳ ಮಾಡುತ್ತಿದ್ದ. ಮೊನ್ನೆ ಮತ್ತೆ ಜಗಳ ಆಗಿದೆ. ಈ ವೇಳೆ ಜಗಳ ವಿಕೋಪಕ್ಕೆ ಹೋಗಿದ್ದು, ಪತ್ನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ. ಬಳಿಕ ತಾನು ಕೂಡ ಬಾವಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ.

ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಉಮೇಶನ ಪತ್ನಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಆಪರೇಷನ್‌ ಟ್ರಾಶಿ-1 ಸಕ್ಸಸ್ – 7 ಪಾಕ್ ಉಗ್ರರು ಫಿನಿಶ್

ಈ ಸಂಬಂಧ ಮೃತ ಉಮೇಶ ಬಡಿಗೇರ ಅವರ ಸಹೋದರ ನಾರಾಯಣ ಬಡಿಗೇರ ರಾಮದುರ್ಗ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಕಳೆದ ನಾಲ್ಕೈದು ವರ್ಷಗಳಿಂದ ಕುಡಿತದ ಚಟಕ್ಕೆ ದಾಸನಾಗಿದ್ದ ನಮ್ಮ ಅಣ್ಣ ಉಮೇಶ, ಅವರ ಪತ್ನಿ ಜೊತೆಗೆ ಜಗಳ ಮಾಡುತ್ತಿದ್ದ. ಮೊನ್ನೆ ಮತ್ತೆ ಜಗಳ ಆಗಿದ್ದು, ರಾಮದುರ್ಗ ಹೊರ ವಲಯದ ಬಾವಿಯಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವರ ಸಾವಿನಲ್ಲಿ ಯಾವುದೇ ಸಂಶಯ ಇಲ್ಲ ಅಂತಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಹೆಚ್ಚಿನ ತನಿಖೆ ಕೈಗೊಂಡಿದ್ದೇವೆ ಎಂದು ರಾಮದುರ್ಗ ಪೊಲೀಸರು ಮಾಹಿತಿ ನೀಡಿದ್ದಾರೆ. ಉಮೇಶನ ಮೃತದೇಹವನ್ನು ಪೊಲೀಸರು ಬಾವಿಯಿಂದ ಹೊರಗೆ ತೆಗೆದಿದ್ದು, ಮರಣೋತ್ತರ ಪರೀಕ್ಷೆ ಮಾಡಲಾಗಿದೆ.

Kishor KV

Leave a Reply

Your email address will not be published. Required fields are marked *