ಅವಧಿ ಪೂರ್ಣಗೊಳ್ಳುವವರೆಗೂ ನಾನೇ ಸಿಎಂ! -ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ ಎಂದ ಸಿದ್ದರಾಮಯ್ಯ!

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗುತ್ತಿದೆ. ಒಂದ್ಕಡೆ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿದ್ರೆ, ಮತ್ತೊಂದ್ಕೆ ಸಿಎಂ ಸಿದ್ಧರಾಮಯ್ಯ ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ದಾಖಲೆ ಬರೆದಿದ್ದಾರೆ. ಈ ಬೆನ್ನಲ್ಲೇ ಸಿಎಂ ಮಹತ್ವದ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಎರಡೇ ದಿನಕ್ಕೆ ತಾಳಿ ಕಿತ್ತೆಸೆದ ಯುವತಿ! – ಪಾಗಲ್ ಪ್ರೇಮಿ ಮಾಡಿದ್ದೇನು ಗೊತ್ತಾ?
ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ.
ಇನ್ನು ಮುಖ್ಯಮಂತ್ರಿಯಾಗಿ ಅವಧಿಯನ್ನು ಪರಿಪೂರ್ಣ ಮಾಡುವ ಬಗ್ಗೆಯೂ ಮಹತ್ವದ ಹೇಳಿಕೆ ನೀಡಿದ್ದಾರೆ. ಅವಧಿ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ. ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದರು.
ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ. ಜನರ ಕೆಲಸ ಮಾಡುವುದು ಖುಷಿಯ ಸಂಗತಿ. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಮಾಡಿಕೊಡುವುದು ಎಂದರು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು. ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದು ಕಾಲಘಟ್ಟ ಬೇರೆ ಬೇರೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದರು.

ನೋಡಿರಿ

