‘ಮುಂದಿನ ಸಲವೂ ನಾನೇ ಮುಖ್ಯಮಂತ್ರಿ’ ಎಂದ ಬೊಮ್ಮಾಯಿ – ಹೈಕಮಾಂಡ್​ ನಿಂದ ಸಿಕ್ಕಿತಾ ಸಮ್ಮತಿ?

‘ಮುಂದಿನ ಸಲವೂ ನಾನೇ ಮುಖ್ಯಮಂತ್ರಿ’ ಎಂದ ಬೊಮ್ಮಾಯಿ – ಹೈಕಮಾಂಡ್​ ನಿಂದ ಸಿಕ್ಕಿತಾ ಸಮ್ಮತಿ?

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೂ ಡೇಟೇ ಅನೌನ್ಸ್ ಆಗಿಲ್ಲ. ಆದ್ರೆ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಜೊತೆ ಸಿಎಂ ರೇಸ್ ಕೂಡ ಜೋರಾಗಿದೆ. ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನಡುವೆ ನೇರಾನೇರಾ ಸಮರ ನಡೀತಿದೆ. ಆದ್ರೆ ಬಿಜೆಪಿಯಲ್ಲಿ ಮಾತ್ರ ಇಷ್ಟು ದಿನ ಹೈಕಮಾಂಡ್ ಹೇಳಿದವರು ಸಿಎಂ ಆಗುತ್ತಾರೆ ಎನ್ನಲಾಗುತ್ತಿತ್ತು. ಆದ್ರೀಗ ಸಿಎಂ ಬಸವರಾಜ ಬೊಮ್ಮಾಯಿ ಮುಂದಿನ ಬಾರಿಯೂ ನಾನೇ ಸಿಎಂ ಎಂದು ತಮ್ಮ ಮನದಾಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಹೆಚ್‌ಡಿಕೆ ನಂತರ ಡಿಕೆಶಿ ಅಮಾವಾಸ್ಯೆ ಪೂಜೆ – ಕಾಲಭೈರವನ ಮೊರೆ ಹೋದರೆ ಸಿಎಂ ಆಗ್ತಾರಾ?

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಧೋಳದಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ತಮ್ಮ ಮನದಾಸೆ ವ್ಯಕ್ತಪಡಿಸಿದ್ದಾರೆ. ಮತ್ತೆ ನಾನೇ ಮುಖ್ಯಮಂತ್ರಿಯಾಗುತ್ತೇನೆ. ಆಗ ವಿವಿಧ ಕ್ಷೇತ್ರಗಳಿಗೆ ಮತ್ತೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ಪಕ್ಷ ತೀರ್ಮಾನಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಚಿತ್ರದುರ್ಗದಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಬೊಮ್ಮಾಯಿ ಅವರು ಈ ರೀತಿ ಹೇಳಿರುವುದು ಬಿಜೆಪಿಯಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ ವರಿಷ್ಠರು ಈಗಾಗಲೇ ಮುಂಬರುವ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಎದುರಿಸುತ್ತೇವೆ ಎಂದು ಘೋಷಿಸಿದ್ದಾರೆ.

suddiyaana