‘ಕ್ರಿಕಿಟಿಗನಾಗಿದ್ದಕ್ಕೆ ಪಶ್ಚಾತ್ತಾಪ ಪಡುತ್ತಿದ್ದೇನೆ’ – ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೀಗೆ ಹೇಳಲು ಕಾರಣ ಏನು?

‘ಕ್ರಿಕಿಟಿಗನಾಗಿದ್ದಕ್ಕೆ ಪಶ್ಚಾತ್ತಾಪ ಪಡುತ್ತಿದ್ದೇನೆ’ – ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೀಗೆ ಹೇಳಲು ಕಾರಣ ಏನು?

ಮೊನ್ನೆ ಮೊನ್ನೆಯಷ್ಟೇ ಮಿಡ್ಲ್ ಫಿಂಗರ್ ತೋರಿಸಿ ಸಾಕಷ್ಟು ಚರ್ಚೆಗೆ ಒಳಗಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ನೀವು

ನೀವು ಜೀವನದಲ್ಲಿ ಯಾವ ವಿಚಾರಕ್ಕೆ ಸಂಬಂದಪಟ್ಟಂತೆ ಹೆಚ್ಚು ವಿಷಾದ ಹೊಂದಿದ್ದೀರಾ? ಎಂದು ಪ್ರಶ್ನೆ ಕೇಳಿದಾಗ ಗೌತಮ್ ಗಂಭೀರ್ ಹೇಳಿರುವ ಮಾತು ಅಚ್ಚರಿಗೆ ಕಾರಣವಾಗಿದೆ. ಕ್ರಿಕೆಟ್‌ನಲ್ಲಿ ಅಷ್ಟೆಲ್ಲಾ ಸಾಧನೆ ಮಾಡಿದರೂ ಗೌತಮ್ ಗಂಭೀರ್ ಹೇಳಿದ ಆ ಒಂದು ಮಾತು ಭಾರೀ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಕೊಹ್ಲಿ ಗಂಭೀರ್ ಜಗಳ – ಇಬ್ಬರಿಗೂ ಪಂದ್ಯದ ಶೇಕಡಾ 100ರಷ್ಟು ದಂಡ..!

41 ವರ್ಷದ ಗೌತಮ್ ಗಂಭೀರ್ ತಮ್ಮ 13 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ಟೀಂ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿಯೂ ಕಣಕ್ಕಿಳಿದವರು. ಪ್ರಮುಖ ಐಸಿಸಿ ಈವೆಂಟ್‌ಗಳಲ್ಲಿ ತಂಡದ ಪರ ಅದ್ಭುತ ಪ್ರದರ್ಶನ ನೀಡಿ ತಂಡದ ಗೆಲುವಿಗೆ ತಮ್ಮದೇ ಕೊಡುಗೆ ನೀಡಿದ್ದರು. ಐಪಿಎಲ್‌ನಲ್ಲೂ ಮಿಂಚಿದ್ದರು. ಕ್ರಿಕೆಟ್ ಲೋಕದಲ್ಲಿ ಇಷ್ಟೆಲ್ಲಾ ಸಾಧನೆಯ ನಡುವೆಯೂ ಗಂಭೀರ್ ತಾನು ಕ್ರಿಕೆಟಿಗನಾಗಿದ್ದಕ್ಕೆ ಹೆಚ್ಚು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳುವ ಮೂಲಕ ಎಲ್ಲರನ್ನೂ ಅಚ್ಚರಿ ಮೂಡಿಸಿದ್ದಾರೆ. ಇತ್ತೀಚಿಗೆ ಸಂದರ್ಶನವೊಂದರಲ್ಲಿ ನಿಮ್ಮ ಜೀವನದಲ್ಲಿ ದೊಡ್ಡ ವಿಷಾದ ಯಾವುದು ಎಂಬ ಪ್ರಶ್ನೆಗೆ ಉತ್ತರಿಸಿದ ಗಂಭೀರ್, ನಾನು ಕ್ರಿಕೆಟಿಗನಾಗಿದ್ದಕ್ಕೆ ಹೆಚ್ಚು ಪಶ್ಚಾತ್ತಾಪ ಪಡುತ್ತೇನೆ ಎಂದಿದ್ದಾರೆ. ಗಂಭೀರ್ ಅವರ ಈ ಹೇಳಿಕೆ ಚರ್ಚೆಗೆ ಕಾರಣವಾಗಿದೆ.

2007ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತದ ಪರ ಗರಿಷ್ಠ ಸ್ಕೋರರ್ ಆಗಿದ್ದ ಗಂಭೀರ್, ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 75 ರನ್‌ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದ್ದರು. ಅಲ್ಲದೆ 2011ರ ಏಕದಿನ ವಿಶ್ವಕಪ್ನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 97 ರನ್‌ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದ ಗಂಭೀರ್, ಭಾರತ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇನ್ನು 2010 ರಲ್ಲಿ ಟೀಂ ಇಂಡಿಯಾವನ್ನು 6 ಪಂದ್ಯಗಳಲ್ಲಿ ಮುನ್ನಡೆಸಿದ್ದ ಗಂಭೀರ್, ಆ 6 ಪಂದ್ಯಗಳಲ್ಲೂ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಇದಲ್ಲದೆ ಐಫಿಎಲ್‌ನಲ್ಲಿಯೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ತಮ್ಮ ನಾಯಕತ್ವದಲ್ಲಿ ಎರಡೂ ಬಾರಿ ಚಾಂಪಿಯನ್ ಮಾಡಿದ್ದರು. ಕ್ರಿಕೆಟ್ ಲೋಕದಲ್ಲಿ ಇಷ್ಟೆಲ್ಲ ಸಾಧನೆಯ ನಡುವೆಯೂ ಗಂಭೀರ್ ತಾನು ಕ್ರಿಕೆಟಿಗನಾಗಿದ್ದಕ್ಕೆ ಹೆಚ್ಚು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದು ಯಾಕೆ ಎಂಬ ಪ್ರಶ್ನೆ ಎದುರಾಗಿದೆ.

suddiyaana