ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳಿಗೆ ನಿಷೇಧ – ಕಾರಣವೇನು ಗೊತ್ತಾ?
ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಇನ್ನುಮುಂದೆ ತೃತೀಯ ಲಿಂಗಿಗಳಿಗೆ ನಿಷೇಧ ಹೇರಿರುವುದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಕ್ರೀಡೆಯ ಸಮಗ್ರತೆ ಮತ್ತು ಆಟಗಾರರ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಐಸಿಸಿ ಸಭೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳು ಭಾಗವಹಿಸುವುದನ್ನು ನಿಷೇಧಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ನಿರ್ಧಾರವು ಮಹಿಳಾ ಕ್ರಿಕೆಟ್ನ ಸಾರವನ್ನು ರಕ್ಷಿಸುವ ಗುರಿ ಹೊಂದಿದೆ. ಆಟದ ಸಮಗ್ರತೆ, ಸುರಕ್ಷತೆ ಮತ್ತು ಒಳಗೊಳ್ಳುವಿಕೆಯನ್ನು ಕೇಂದ್ರೀಕರಿಸಿದ ಈ ನಿಯಮಗಳನ್ನ ಮಾಡಲಾಗಿದ್ದು, 2 ವರ್ಷಗಳಲ್ಲಿ ಮೌಲ್ಯಮಾಪನಕ್ಕೆ ಒಳಗಾಗುತ್ತವೆ ಎಂಬುದಾಗಿ ತಿಳಿಸಿದೆ.
ಇದನ್ನೂ ಓದಿ: ಐಸಿಸಿ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಸೋತರೂ ಹಣದ ಹೊಳೆ – ಎಷ್ಟು ಕೋಟಿಯ ಬ್ಯುಸಿನೆಸ್ ಗೊತ್ತಾ?
ಜನನದ ಸಮಯದಲ್ಲಿ ಪುರುಷನಾಗಿದ್ದು, ಪುರುಷನಾಗಿಯೇ ಪ್ರೌಢಾವಸ್ಥೆಗೆ ಒಳಗಾದ ವ್ಯಕ್ತಿ, ನಂತರದಲ್ಲಿ ಲಿಂಗ ಬದಲಾವಣೆ ಕಾರ್ಯವಿಧಾನಗಳಿಗೆ ಒಳಗಾಗಿದ್ದರೇ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಅರ್ಹತೆ ಪಡೆಯುವುದಿಲ್ಲ ಎಂಬುದನ್ನು ಐಸಿಸಿ ದೃಢೀಕರಿಸಿದೆ. 9 ತಿಂಗಳ ಸಮಾಲೋಚನೆಯ ನಂತರ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ರಿಚರ್ಡ್ ಥಾಂಪ್ಸನ್ ಸೇರಿದಂತೆ ಐಸಿಸಿ ಮಂಡಳಿಯು ಈ ಲಿಂಗ ಅರ್ಹತಾ ನಿಯಮಗಳನ್ನು ಅಂತಿಮಗೊಳಿಸಲಾಗಿದೆ ಎಂದು ವರದಿಯಾಗಿದೆ.