ಐಸಿಸಿ 2027 ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ – ಒಂದೇ ಗುಂಪಿನಲ್ಲಿ ಭಾರತ–ಪಾಕಿಸ್ತಾನ ಫೈಟ್

ಐಸಿಸಿ 2027 ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ –  ಒಂದೇ ಗುಂಪಿನಲ್ಲಿ  ಭಾರತ–ಪಾಕಿಸ್ತಾನ ಫೈಟ್

ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ 2027ರ ಐಸಿಸಿ ವಿಶ್ವಕಪ್‌ಗೆ ಸಂಬಂಧಿಸಿದ ವೇಳಾಪಟ್ಟಿ ಬಿಡುಗಡೆಯಾಗಿದೆ. ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿರುವ ಈ ಮಹತ್ವದ ಟೂರ್ನಿಯಲ್ಲಿ ಒಟ್ಟು 14 ತಂಡಗಳು ಕಣಕ್ಕಿಳಿಯಲಿದ್ದು, 57 ಪಂದ್ಯಗಳು ನಡೆಯಲಿವೆ. ಅಕ್ಟೋಬರ್ 2ರಿಂದ ನವೆಂಬರ್ 21ರವರೆಗೆ ವಿಶ್ವಕಪ್ ಕ್ರಿಕೆಟ್ ಹಬ್ಬ ನಡೆಯಲಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ಭಾರತ ಮತ್ತು ಪಾಕಿಸ್ತಾನ ತಂಡಗಳ ಮುಖಾಮುಖಿ. ಸಾಂಪ್ರದಾಯಿಕ ಎದುರಾಳಿಗಳಾದ ಈ ಎರಡು ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ. ಹೀಗಾಗಿ ಅಭಿಮಾನಿಗಳಿಗೆ ಮತ್ತೊಮ್ಮೆ ಹೈವೋಲ್ಟೇಜ್ ಪಂದ್ಯವನ್ನು ವೀಕ್ಷಿಸುವ ಅವಕಾಶ ಸಿಗಲಿದೆ.

ಇದನ್ನೂ ಓದಿ: ಸ್ವಿಂಗ್, ಸೀಮ್ ಇಲ್ಲ.. ವಿಕೆಟ್ಸ್ ಬೀಳಲ್ಲ – ಬ್ಯಾಟರ್ಸ್ ಬೆಂಕಿಗೆ ಬೌಲರ್ಸ್ ಬಲಿಪಶು

ಇನ್ನು ಟೀಮ್ ಇಂಡಿಯಾದ ಆರಂಭಿಕ ಪಂದ್ಯಗಳೂ ಸಾಕಷ್ಟು ಕುತೂಹಲ ಮೂಡಿಸಿವೆ. ಅಕ್ಟೋಬರ್ 7ರಂದು ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೆಣಸಾಡಲಿದೆ. ಆ ಬಳಿಕ ಅಕ್ಟೋಬರ್ 10ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಆರಂಭದಲ್ಲೇ ಬಲಿಷ್ಠ ತಂಡಗಳ ಸವಾಲು ಎದುರಾಗುತ್ತಿರುವುದರಿಂದ ಭಾರತದ ವಿಶ್ವಕಪ್ ಅಭಿಯಾನ ಸಾಕಷ್ಟು ರೋಚಕವಾಗಿರಲಿದೆ.

14 ತಂಡಗಳು, 57 ಪಂದ್ಯಗಳು ಮತ್ತು ಸುಮಾರು ಎರಡು ತಿಂಗಳ ಕ್ರಿಕೆಟ್ ಸಂಭ್ರಮ ಅಭಿಮಾನಿಗಳನ್ನು ರಂಜಿಸಲಿದೆ. ಆತಿಥೇಯ ರಾಷ್ಟ್ರಗಳಾದ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಯಾವ ತಂಡ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ.

ಭಾರತ ತಂಡ ವಿಶ್ವಕಪ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗುತ್ತದೆಯೇ? ಭಾರತ–ಪಾಕಿಸ್ತಾನ ಪಂದ್ಯದಲ್ಲಿ ಗೆಲುವು ಯಾರಿಗೆ ಸಿಗಲಿದೆ? ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ.

Kishor KV

Leave a Reply

Your email address will not be published. Required fields are marked *