ವಿರಾಟ್ ಕೊಹ್ಲಿಗೆ ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಗರಿ – ರೇಸ್ನಲ್ಲಿದ್ದ ಗಿಲ್ಗೆ ಅನ್ಯಾಯ?
ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ 2023ನೇ ಸಾಲಿನ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಲಭಿಸಿದೆ. ಇದರೊಂದಿಗೆ ಕಿಂಗ್ ಕೊಹ್ಲಿ ನಾಲ್ಕನೇ ಬಾರಿಗೆ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಏಕದಿನ ಕ್ರಿಕೆಟಿಗ ಪ್ರಶಸ್ತಿ ರೇಸ್ನಲ್ಲಿ ವಿರಾಟ್ ಕೊಹ್ಲಿ ಹೊರತಾಗಿ ಟೀಂ ಇಂಡಿಯಾದ ಇನ್ನಿಬ್ಬರು ಆಟಗಾರರಾದ ಮೊಹಮ್ಮದ್ ಶಮಿ ಮತ್ತು ಶುಭ್ಮನ್ ಗಿಲ್ ಕೂಡ ಇದ್ದರು.
ಇದನ್ನೂ ಓದಿ: ಸರ್ಫರಾಝ್ ಖಾನ್ ಸಿಡಿಲಬ್ಬರದ ಶತಕ – ಸ್ಫೋಟಕ ಸೆಂಚುರಿ ಸಿಡಿಸಿ ತಕ್ಕ ಉತ್ತರ ನೀಡಿದ ಯುವ ದಾಂಡಿಗ
ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ 2023ನೇ ಸಾಲಿನ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಲಭಿಸಿದೆ. ಇದರೊಂದಿಗೆ ಕಿಂಗ್ ಕೊಹ್ಲಿ ನಾಲ್ಕನೇ ಬಾರಿಗೆ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿರಾಟ್ ಕೊಹ್ಲಿ ಇದಕ್ಕೂ ಮೊದಲು ಮೂರು ಬಾರಿ ಈ ಪ್ರಶಸ್ತಿ ಗೆದ್ದಿದ್ದರು. ನಾಲ್ಕನೇ ಬಾರಿಗೆ ಈ ಪ್ರಶಸ್ತಿ ಗೆಲ್ಲುವ ಮೂಲಕ ವಿಶ್ವ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಬಾರಿ ವರ್ಷದ ಏಕದಿನ ಪ್ರಶಸ್ತಿ ಗೆದ್ದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ. 2023 ರಲ್ಲಿ ನಡೆದ ಏಕದಿನ ವಿಶ್ವಕಪ್ನಲ್ಲಿ ಅಮೋಘ ಬ್ಯಾಟಿಂಗ್ ಮೂಲಕ ದಾಖಲೆ ನಿರ್ಮಿಸಿದ್ದ ಕೊಹ್ಲಿ ಬರೋಬ್ಬರಿ 765 ರನ್ ಕಲೆಹಾಕಿದ್ದರು. ಈ ಮೂಲಕ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಒಂದು ಆವೃತ್ತಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ್ದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆದಿದ್ದರು.
ಇನ್ನು 2023ನೇ ಸಾಲಿನ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ರೇಸ್ನಲ್ಲಿ ವಿರಾಟ್ ಕೊಹ್ಲಿ ಹೊರತಾಗಿ ಟೀಂ ಇಂಡಿಯಾದ ಇನ್ನಿಬ್ಬರು ಆಟಗಾರರಾದ ಮೊಹಮ್ಮದ್ ಶಮಿ ಮತ್ತು ಶುಭ್ಮನ್ ಗಿಲ್ ಕೂಡ ಇದ್ದರು. ಆದರೆ ಈ ಇಬ್ಬರನ್ನು ಹಿಂದಿಕ್ಕಿರುವ ಕೊಹ್ಲಿ ದಾಖಲೆಯ ನಾಲ್ಕನೇ ಬಾರಿಗೆ ಈ ಗೌರವಕ್ಕೆ ಭಾಜನರಾಗಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2020 ರಿಂದ 2022 ರವರೆಗೆ ರನ್ಗಳ ಬರ ಎದುರಿಸಿದ್ದ ವಿರಾಟ್ ಕೊಹ್ಲಿ, 2023 ರಲ್ಲಿ ತಮ್ಮ ಹಳೆಯ ಲಯಕ್ಕೆ ಮರಳಿದ್ದರು. ವರ್ಷದ ಮೊದಲ ತಿಂಗಳಲ್ಲಿ ಅಂದರೆ ಜನವರಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಕೊಹ್ಲಿ ಎರಡು ಶತಕಗಳನ್ನು ಸಿಡಿಸಿದ್ದರು. ಆ ನಂತರ ನವೆಂಬರ್ನಲ್ಲಿ ನಡೆದ 2023 ರ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ವಿಶ್ವದಾಖಲೆ 50 ನೇ ಏಕದಿನ ಶತಕವನ್ನು ಪೂರೈಸಿದ್ದರು.