ಐಸಿಸಿ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ ಪ್ರಕಟ – ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಕ್ರಿಕೆಟ್ ಹಬ್ಬ

ಐಸಿಸಿ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ ಪ್ರಕಟ – ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಕ್ರಿಕೆಟ್ ಹಬ್ಬ

ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದ ದಿನಗಳು ಕೊನೆಗೂ ಬಂದಿದೆ. ಬಹುನಿರೀಕ್ಷಿತ ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ  ಪ್ರಕಟಗೊಂಡಿದ್ದು,  ಅಕ್ಟೋಬರ್‌ 5 ರಂದು ಈ ಮಹತ್ವದ ಟೂರ್ನಿಗೆ ಚಾಲನೆ ಸಿಗಲಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮುಂಬೈನಲ್ಲಿ ನಡೆದ 100 ದಿನಗಳ ವಿಶ್ವಕಪ್ ಸಮಾರಂಭದಲ್ಲಿ ವಿಶ್ವಕಪ್ 2023 ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ.

ಇದನ್ನೂ ಓದಿ: ರೋಚಕ ಪಂದ್ಯವೊಂದಕ್ಕೆ ಸಜ್ಜಾಗಿ! – ಕೆ.ಎಲ್‌ ರಾಹುಲ್‌ ಜೀವನಾಧಾರಿತ ಚಿತ್ರ ನಿರ್ಮಾಣ?

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಅಕ್ಟೋಬರ್‌ 5 ರಿಂದ ನವೆಂಬರ್‌ 19 ರವರೆಗೆ ನಡೆಯಲಿದೆ. ಸೆಮಿಫೈನಲ್ ಪಂದ್ಯಗಳು ಮುಂಬೈ ಮತ್ತು ಕೋಲ್ಕತ್ತಾದಲ್ಲಿ ನವೆಂಬರ್ 15 ಮತ್ತು 16 ರಂದು ಆಯೋಜಿಸಲಾಗಿದ್ದು, ಫೈನಲ್ ಪಂದ್ಯವು ನವೆಂಬರ್ 19 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ. ಭಾರತ ತಂಡ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಟೀಮ್ ಇಂಡಿಯಾ ಒಟ್ಟು ಒಂತ್ತು ಪಂದ್ಯಗಳನ್ನ ಆಡಲಿದೆ. ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ, ಇಂಗ್ಲೆಂಡ್, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಕ್ವಾಲಿಫೈಯರ್ 1, ಕ್ವಾಲಿಫೈಯರ್ 2 ವಿರುದ್ಧ ಸೆಣೆಸಾಟ ನಡೆಯಲಿದೆ.

ಭಾರತ ಪಂದ್ಯದ ಸಂಪೂರ್ಣ ವೇಳಾಪಟ್ಟಿ:

ಭಾರತ vs ಆಸ್ಟ್ರೇಲಿಯಾ- 8 ಅಕ್ಟೋಬರ್, ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

ಭಾರತ vs ಅಫ್ಘಾನಿಸ್ತಾನ- 11 ಅಕ್ಟೋಬರ್, ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ

ಭಾರತ vs ಪಾಕಿಸ್ತಾನ- 15 ಅಕ್ಟೋಬರ್, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

ಭಾರತ vs ಬಾಂಗ್ಲಾದೇಶ- 19 ಅಕ್ಟೋಬರ್, ಎಂಸಿಎ ಸ್ಟೇಡಿಯಂ, ಪುಣೆ

ಭಾರತ vs ನ್ಯೂಜಿಲೆಂಡ್- 22 ಅಕ್ಟೋಬರ್, HPCA ಸ್ಟೇಡಿಯಂ, ಧರ್ಮಶಾಲಾ

ಭಾರತ vs ಇಂಗ್ಲೆಂಡ್- 29 ಅಕ್ಟೋಬರ್, ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

ಭಾರತ vs ಕ್ವಾಲಿಫೈಯರ್ 2- 2 ನವೆಂಬರ್, ವಾಂಖೆಡೆ ಸ್ಟೇಡಿಯಂ, ಮುಂಬೈ

ಭಾರತ vs ದಕ್ಷಿಣ ಆಫ್ರಿಕಾ- 5 ನವೆಂಬರ್, ಈಡನ್ ಗಾರ್ಡನ್ಸ್, ಕೋಲ್ಕತ್ತಾ

ಭಾರತ vs ಕ್ವಾಲಿಫೈಯರ್ 1- 11 ನವೆಂಬರ್, ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು

suddiyaana