ICC RANKINGನಲ್ಲಿ ಭಾರತದ ದರ್ಬಾರ್! – ಶ್ರೇಯಸ್ ಅಯ್ಯರ್ ಭರ್ಜರಿ ಜಂಪ್!

ಐಸಿಸಿ ಟಿ20 ರ್ಯಾಂಕಿಂಗ್ನಲ್ಲಿ ಟೀಂ ಇಂಡಿಯಾದ ಪಾರುಪತ್ಯ ಮುಂದುವರೆದಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಭಾರತೀಯ ಆಟಗಾರರ ಅದ್ಭುತ ಪ್ರದರ್ಶನ ಇದೀಗ ರ್ಯಾಂಕಿಂಗ್ ಪಟ್ಟಿಯಲ್ಲೂ ಪ್ರತಿಫಲಿಸಿದೆ.
ವಿಶೇಷವಾಗಿ ಶ್ರೇಯಸ್ ಅಯ್ಯರ್ ಭರ್ಜರಿ ಜಿಗಿತ ಕಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದ ಶ್ರೇಯಸ್ ಅಯ್ಯರ್ ಬರೋಬ್ಬರಿ 18 ಸ್ಥಾನಗಳ ಏರಿಕೆ ಕಂಡಿದ್ದು, ಇದೀಗ ಟಿ20 ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ 7ನೇ ಸ್ಥಾನಕ್ಕೇರಿದ್ದಾರೆ. ಈ ಮೂಲಕ ತಮ್ಮ ಫಾರ್ಮ್ಗೆ ತಕ್ಕ ಪ್ರತಿಫಲ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಕೊಹ್ಲಿಗೆ ₹5 Cr ಕೊಟ್ರಾ ಪ್ರೇಮಾನಂದ? ಅಗರ್ಕರ್ ನಿರ್ಗಮನಕ್ಕೆ ಗೌತಿ ಕಣ್ಣೀರು!
ಇನ್ನು ಟಿ20 ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಭಾರತದ ಇಶಾನ್ ಕಿಶನ್ ತಮ್ಮ ಅಗ್ರಸ್ಥಾನವನ್ನು ಮತ್ತೊಮ್ಮೆ ಉಳಿಸಿಕೊಂಡಿದ್ದಾರೆ. ಮತ್ತೊಂದೆಡೆ ಯುವ ಬ್ಯಾಟರ್ ಅಭಿಷೇಕ್ ಶರ್ಮಾ ಎರಡನೇ ಸ್ಥಾನದಲ್ಲಿ ಮುಂದುವರೆದಿದ್ದು, ಟೀಂ ಇಂಡಿಯಾದ ಬ್ಯಾಟಿಂಗ್ ಬಲ ಎಷ್ಟು ಗಟ್ಟಿಯಾಗಿದೆ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ.
ಬೌಲರ್ಗಳ ಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡುಬಂದಿದೆ. ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಅಗ್ರಸ್ಥಾನಕ್ಕೇರಿದ್ದಾರೆ. ಭಾರತದ ಆಲ್ರೌಂಡರ್ ಅಕ್ಷರ್ ಪಟೇಲ್ ಕೂಡ ಟಾಪ್ 10ರಲ್ಲಿ ಸ್ಥಾನ ಉಳಿಸಿಕೊಂಡಿದ್ದು, 7ನೇ ಸ್ಥಾನದಲ್ಲಿದ್ದಾರೆ.
ಒಟ್ಟಿನಲ್ಲಿ ಐಸಿಸಿ ಟಿ20 ರ್ಯಾಂಕಿಂಗ್ನಲ್ಲಿ ಭಾರತೀಯ ಆಟಗಾರರ ಪ್ರಾಬಲ್ಯ ಮುಂದುವರೆದಿದ್ದು, ಮುಂಬರುವ ಪಂದ್ಯಗಳಲ್ಲಿ ಈ ಸ್ಥಾನಗಳು ಇನ್ನಷ್ಟು ಬದಲಾಗುವ ಸಾಧ್ಯತೆ ಇದೆ.

ನೋಡಿರಿ

