ಭಾರತದ ವಿರುದ್ಧ ಟಿ20 ವಿಶ್ವಕಪ್ ಪಂದ್ಯ ಆಡಲ್ಲ –ಪಾಕಿಸ್ತಾನಕ್ಕೆ ಪತ್ರದ ಮೂಲಕ ಐಸಿಸಿ ಎಚ್ಚರಿಕೆ

ಪಾಕಿಸ್ತಾನ ತನ್ನ ಗುಂಡಿಯನ್ನು ತಾನೇ ತೋಡಿಕೊಳ್ಳುತ್ತಿದೆ. ಇದೀಗ ಫೆಬ್ರವರಿ 15 ರಂದು ನಡೆಯಲಿರುವ ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ ನಿರ್ಧರಿಸಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ಗೆ ಐಸಿಸಿ ಬಹಿರಂಗ ಪತ್ರ ಬರೆದಿದೆ.
ಇದನ್ನೂ ಓದಿ:T-20Iನಲ್ಲಿ ಇನ್ನೆಂದೂ ಆಡಲ್ಲ KL – IPL ಸಕ್ಸಸ್ ಭಾರತದ ಪರ ಸಿಗ್ಲಿಲ್ವಾ?
ಟಿ 20 ವಿಶ್ವಕಪ್ ಗೆ ಇನ್ನಿರುವುದು ನಾಲ್ಕೇ ದಿನ. ಶನಿವಾರವೇ ಟೂರ್ನಿ ಆರಂಭವಾಗಲಿದೆ. ಶನಿವಾರದಿಂದ ಪ್ರಾರಂಭವಾಗುವ ಟಿ20 ವಿಶ್ವಕಪ್ನಲ್ಲಿ ಭಾಗವಹಿಸಲು ಪಾಕಿಸ್ತಾನ ಸರ್ಕಾರ ತನ್ನ ಪುರುಷರ ಕ್ರಿಕೆಟ್ ತಂಡಕ್ಕೆ ಅನುಮತಿ ನೀಡಿತ್ತು. ಇದರ ಮಧ್ಯೆ ದಿಢೀರ್ ಆಗಿ ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಲೀಗ್ ಹಂತದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ ಸರ್ಕಾರ ಹೇಳಿದೆ.
ಭಾರತದಿಂದ ಶ್ರೀಲಂಕಾಕ್ಕೆ ಟಿ20 ವಿಶ್ವಕಪ್ ಪಂದ್ಯಗಳನ್ನು ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶದ ಮನವಿಯನ್ನು ಐಸಿಸಿ ತಿರಸ್ಕರಿಸಿದ ನಂತರ ಪಾಕಿಸ್ತಾನ ಪಂದ್ಯಾವಳಿಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿತ್ತು. ಭದ್ರತಾ ಕಾರಣಗಳಿಂದಾಗಿ ಭಾರತದಲ್ಲಿ ಆಡಲು ಇಚ್ಛಿಸದ ಬಾಂಗ್ಲಾದೇಶವನ್ನು ಟಿ20 ವಿಶ್ವಕಪ್ನಿಂದ ಕೈ ಬಿಡಲಾಗಿದೆ. ಅಲ್ಲದೆ ಬಾಂಗ್ಲಾ ಬದಲಿಗೆ ಸ್ಕಾಟ್ಲೆಂಡ್ ತಂಡಕ್ಕೆ ಅವಕಾಶ ನೀಡಲಾಗಿದೆ. ಐಸಿಸಿ ಹಾಗೂ ಬಿಸಿಸಿಐನ ಈ ನಿರ್ಧಾರವನ್ನು ಖಂಡಿಸುವ ಸಲುವಾಗಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಆದರೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಈ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಐಸಿಸಿ ಆಗ್ರಹಿಸಿದೆ.
ಪಿಸಿಬಿ ತೆಗೆದುಕೊಂಡಿರುವ ನಿರ್ಧಾರನಿಂದ ಕ್ರಿಕೆಟ್ ಆಗುವ ಮಹತ್ವದ ಮತ್ತು ದೀರ್ಘಕಾಲೀನ ಪರಿಣಾಮಗಳನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಪರಿಗಣಿಸಬೇಕೆಂದು ಐಸಿಸಿ ಪರೋಕ್ಷವಾಗಿ ಎಚ್ಚರಿಕೆ ನೀಡಿದೆ. ಏಕೆಂದರೆ ಒಂದು ನಿರ್ಧಾರವವು ಜಾಗತಿಕ ಕ್ರಿಕೆಟ್ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಪಾಕಿಸ್ತಾನ್ ತಂಡವು ಐಸಿಸಿಯ ಪೂರ್ಣ ಸದಸ್ಯ ರಾಷ್ಟ್ರ ಅಲ್ಲದೆ ಫಲಾನುಭವಿ. ಮುಂಬರುವ ಟಿ 20 ವಿಶ್ವಕಪ್ ಅನ್ನು ಯಶಸ್ವಿಯಾಗಿ ನಿರ್ವಹಿಸುವುದು ಐಸಿಸಿಯ ಆದ್ಯತೆಯಾಗಿದೆ. ಇದು ಪಿಸಿಬಿ ಸೇರಿದಂತೆ ಅದರ ಎಲ್ಲಾ ಸದಸ್ಯರ ಜವಾಬ್ದಾರಿಯೂ ಆಗಿರಬೇಕು. ಎಲ್ಲಾ ಪಾಲುದಾರರ ಹಿತಾಸಕ್ತಿಗಳನ್ನು ರಕ್ಷಿಸುವ ಪರಸ್ಪರ ಸ್ವೀಕಾರಾರ್ಹ ನಿರ್ಣಯವನ್ನು ಪಿಸಿಬಿ ಅನ್ವೇಷಿಸುತ್ತದೆ ಎಂದು ನಿರೀಕ್ಷಿಸುತ್ತಿದೆ ಎಂದು ಐಸಿಸಿ ತನ್ನ ಪತ್ರದಲ್ಲಿ ತಿಳಿಸಿದೆ.

ನೋಡಿರಿ

