ಪ್ರಧಾನಿ ಮೋದಿ ಕೋಪಗೊಂಡಿದ್ದರೆ ಸಿಎಂ ಬಿರೇನ್ ಸಿಂಗ್ ವಜಾ ಮಾಡಬಹುದಿತ್ತು – ಮಲ್ಲಿಕಾರ್ಜುನ ಖರ್ಗೆ ಟಾಂಗ್

ಪ್ರಧಾನಿ ಮೋದಿ ಕೋಪಗೊಂಡಿದ್ದರೆ ಸಿಎಂ ಬಿರೇನ್ ಸಿಂಗ್ ವಜಾ ಮಾಡಬಹುದಿತ್ತು – ಮಲ್ಲಿಕಾರ್ಜುನ ಖರ್ಗೆ ಟಾಂಗ್

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಸಂಸತ್‌ನಲ್ಲಿ ವಿವರವಾದ ಹೇಳಿಕೆ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮೋದಿಯವರು ಮಣಿಪುರದ ಹಿಂಸಾಚಾರದ ಬಗ್ಗೆ ಸಂಸತ್ತಿನಲ್ಲಿ ಇದುವರೆಗೂ ಹೇಳಿಕೆ ನೀಡಿಲ್ಲ. ಕೇಂದ್ರ ಮತ್ತು ಮಣಿಪುರ ರಾಜ್ಯದಲ್ಲಿ ನಿಮ್ಮದೇ ಸರ್ಕಾರ ಅಧಿಕಾರದಲ್ಲಿದ್ದು 80 ದಿನಗಳ ಕಾಲ ಹಿಂಸಾಚಾರ ನಡೆದ ಬಗ್ಗೆ ಸಮಗ್ರ ವಿವರವನ್ನು ನೀಡಬೇಕು ಎಂದು ಸಮಗ್ರ ಭಾರತ ಬಯಸುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರ ರಕ್ಷಣೆ ಮಾಡಿದ ನನಗೆ ನನ್ನ ಪತ್ನಿಯನ್ನು ರಕ್ಷಣೆ ಮಾಡಲು ಆಗಲಿಲ್ಲ –  ಮಣಿಪುರದಲ್ಲಿ ನಿವೃತ್ತ ಯೋಧನ ಕಣ್ಣೀರು

ಮಣಿಪುರದಲ್ಲಿ  ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿಜವಾಗಿಯೂ ಕೋಪಗೊಂಡಿದ್ದರೆ, ಅವರು ಮೊದಲು ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರನ್ನು ವಜಾ ಮಾಡಬಹುದಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡುವ ಮೂಲಕ ಮೋದಿಗೆ ಟಾಂಗ್ ನೀಡಿದರು. ತಮ್ಮ ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ ಖರ್ಗೆ, ನಂತರ ಪ್ರತ್ಯೇಕ ಟ್ವೀಟ್‌ನಲ್ಲಿ ವಾಗ್ದಾಳಿ ನಡೆಸಿದರು. ಶುಕ್ರವಾರದ ಸಂಸತ್ತಿನಲ್ಲಿ ಮಣಿಪುರ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಬಹುದು ಎಂದು ಭಾರತ ನಿರೀಕ್ಷಿಸುತ್ತಿದೆ ಎಂದು ಖರ್ಗೆ ಹೇಳಿದ್ದಾರೆ. ನಿಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೇತೃತ್ವದಲ್ಲಿ 80 ದಿನಗಳ ಕಾಲ ನಡೆದ ಹಿಂಸಾಚಾರದ ಬಗ್ಗೆ ಸಂಪೂರ್ಣ ಅಸಹಾಯಕ ಮತ್ತು ಪಶ್ಚಾತ್ತಾಪವಿಲ್ಲದೆ ವಿಸ್ತೃತವಾದ ಹೇಳಿಕೆಯನ್ನು ನೀಡಬೇಕೆಂದು ವಿಪಕ್ಷಗಳ ಒಕ್ಕೂಟ ಇಂಡಿಯಾ ಬಯಸುತ್ತಿದೆ ಎಂದು ಅವರು ಹೇಳಿದರು.

suddiyaana