ಸಿಎಂ ಕಚೇರಿಯಲ್ಲಿ ಕೆಲಸ ಆಗಬೇಕಾದ್ರೆ 30 ಲಕ್ಷ ಲಂಚ ಕೊಡಬೇಕು! – ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ

ಸಿಎಂ ಕಚೇರಿಯಲ್ಲಿ ಕೆಲಸ ಆಗಬೇಕಾದ್ರೆ 30 ಲಕ್ಷ ಲಂಚ ಕೊಡಬೇಕು! – ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ

ಬೆಂಗಳೂರು: ವಿಧಾನಸಭೆ ಅಧಿವೇಶನ ಶುರುವಾಗಿದ್ದು ಬಜೆಟ್ ಮಂಡನೆಗೆ ಕಾಂಗ್ರೆಸ್ ಸಿದ್ಧತೆ ಮಾಡಿಕೊಳಯತ್ತಿದೆ. ಇತ್ತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಮುಖ್ಯಮಂತ್ರಿ ಕಚೇರಿಯಲ್ಲಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಶಾಸಕರ ಶಿಫಾರಸ್ಸು ತಂದರೆ ಸಾಲದು. 30 ಲಕ್ಷ ರೂಪಾಯಿ ಕೊಡಬೇಕು ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: ʼದ್ವೇಷವೇ ನಮ್ಮ ತಂದೆ-ತಾಯಿ, ದ್ವೇಷವೇ ನಮ್ಮ ಬಂಧು-ಬಳಗʼ ಎಂಬಂತಿದೆ ಕಾಂಗ್ರೆಸ್‌ ಸರ್ಕಾರದ ಆಡಳಿತ – ಬಿಜೆಪಿ ಕಿಡಿ

ಇತ್ತೀಚೆಗೆ, ಶಾಸಕರೊಬ್ಬರ ಆಪ್ತರು ತಮ್ಮ ಕ್ಷೇತ್ರದ ಕೆಲಸಕ್ಕಾಗಿ ಸಿಎಂ ಕಚೇರಿಗೆ ಹೋಗಿದ್ದರು. ಅಲ್ಲಿ, ಶಾಸಕರ ಶಿಫಾರಸು ಪತ್ರವನ್ನು ತೋರಿಸಿದಾಗ ಸಿಎಂ ಕಚೇರಿಯ ಅಧಿಕಾರಿಗಳು, ಕೇವಲ ಶಾಸಕರ ಶಿಫಾರಸು ಪತ್ರ ತಂದರೆ ಸಾಲದು, 30 ಲಕ್ಷ ರೂಪಾಯಿ ಹಣವನ್ನು ತಂದರೆ ನಿಮ್ಮ ಕೆಲಸವಾಗುತ್ತದೆ ಎಂದು ತಿಳಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದಿಂದ ಸಿಂಡಿಕೇಟ್ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಹೆಚ್​ಡಿಕೆ ಆರೋಪ ಮಾಡಿದ್ದಾರೆ.

ಹೆಚ್‌ಡಿಕೆ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ದನಿಗೂಡಿಸಿದ್ದಾರೆ. ಸಣ್ಣಪುಟ್ಟ ಕೆಲಸಕ್ಕೆ 30 ಲಕ್ಷ ಇರಬೇಕು. ಅಲ್ಲಿ ಕೋಟಿ ರೂಪಾಯಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತದೆ ಎಂದಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರುವ ಸಚಿವ ಪ್ರಿಯಾಂಕ್ ಖರ್ಗೆ, ಹೆಚ್​ಡಿ ಕುಮಾರಸ್ವಾಮಿ ಮೈಪರಚಿಕೊಳ್ಳುವ ಕೆಲಸ ಮಾಡಬಾರದು. ದಾಖಲೆ ಇಟ್ಟು ಮಾತಾಡಲಿ ಎಂದು ಹೇಳಿದ್ದಾರೆ.

suddiyaana