ಬಿಳಿಗಿರಿ ರಂಗನಬೆಟ್ಟಕ್ಕೆ ತೆರಳುವವರಿಗೆ ಮಹತ್ವದ ಮಾಹಿತಿ – ಎರಡು ದಿನಗಳ ಕಾಲ ದ್ವಿಚಕ್ರ ವಾಹನ ಸಂಚಾರಕ್ಕೆ ನಿರ್ಬಂಧ!

ಬಿಳಿಗಿರಿ ರಂಗನಬೆಟ್ಟಕ್ಕೆ ತೆರಳುವವರಿಗೆ ಮಹತ್ವದ ಮಾಹಿತಿ – ಎರಡು ದಿನಗಳ ಕಾಲ ದ್ವಿಚಕ್ರ ವಾಹನ ಸಂಚಾರಕ್ಕೆ ನಿರ್ಬಂಧ!

ಪ್ರಸಿದ್ಧ ಯಾತ್ರಾ ಸ್ಥಳ ಯಳಂದೂರು ತಾಲೂಕಿನಲ್ಲಿರುವ ಬಿಳಿಗಿರಿ ರಂಗನಬೆಟ್ಟಕ್ಕೆ ತೆರಳುತ್ತಿರುವವರಿಗೆ ಮಹತ್ವದ ಸುದ್ದಿಯೊಂದಿದೆ. ಸಂಕ್ರಾಂತಿ ಹಬ್ಬದಂದು ಬಿಳಿಗಿರಿ ರಂಗನಬೆಟ್ಟಕ್ಕೆ ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇದನ್ನೂ ಓದಿ: ಲಕ್ಷದ್ವೀಪಕ್ಕೆ ಹೋಗಬೇಕು ಎಂಬ ಪ್ಲಾನ್ ಮಾಡ್ತಿದ್ದೀರಾ ? – ಕನೆಕ್ಟಿವಿಟಿ ವಿಚಾರದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಈ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜ. 15 ಹಾಗೂ 16 ರಂದು ಸಂಕ್ರಾಂತಿ ಹಾಗೂ ಚಿಕ್ಕಜಾತ್ರೆ ನಡೆಯಲಿದೆ. ಜಾತ್ರಾ ಮಹೋತ್ಸವಕ್ಕೆ ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ವಾಹನಗಳ ದಟ್ಟಣೆ, ಅಪಘಾತ ತಡೆ, ಸುಗಮ ವಾಹನ ಸಂಚಾರಕ್ಕಾಗಿ ಎರಡು ದಿನಗಳ ಕಾಲ ದ್ವಿಚಕ್ರ ವಾಹನಗಳಿಗೆ ‌ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಬೈಕ್‌ಗಳಿಗೆ ನಿರ್ಬಂಧ ಹೇರಿ ಡಿಸಿ ಶಿಲ್ಪಾ ನಾಗ್ ಆದೇಶ ಹೊರಡಿಸಿದ್ದಾರೆ.

ಈ ಎರಡು ದಿನ ವಾಹನ ದಟ್ಟನೆ ಹೆಚ್ಚಾಗುವ ಸಾಧ್ಯತೆ ಇದ್ದು ಬೆಟ್ಟದ ರಸ್ತೆ ಕಿರಿದು ಹಾಗೂ ಕಡಿದಾದ ಕಾರಣ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಕೈಗೊಂಡಿದೆ. ಗುಂಬಳ್ಳಿ ಮತ್ತು ಹೊಂಡರಬಾಳು ಎರಡು ಅರಣ್ಯ ಇಲಾಖೆಯ ಚೆಕ್‌ ಪೋಸ್ಟ್ ಗಳಲ್ಲಿಯೂ ನಿರ್ಬಂಧ ವಿಧಿಸಿದ್ದಾರೆ.

Shwetha M