ಜೈಲಿನಲ್ಲೇ ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಿದ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್!

ಜೈಲಿನಲ್ಲೇ ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಿದ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್!

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ಗುರುವಾರ ಬೆಳಗ್ಗೆ 8 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಜನರು ಮತಗಟ್ಟೆಗೆ ತೆರಳಿ ವೋಟ್‌ ಹಾಕುತ್ತಿದ್ದಾರೆ. ಇದೀಗ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೇರಿದಂತೆ ಇತರ ಪ್ರಮುಖ ಬಂಧಿತ ರಾಜಕೀಯ ವ್ಯಕ್ತಿಗಳು ಅಂಚೆ ಮತಪತ್ರದ ಮೂಲಕ ಜೈಲಿನಿಂದಲೇ ಮತ ಚಲಾಯಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಹುಕ್ಕಾ ಸೇವನೆ, ಮಾರಾಟ ಬ್ಯಾನ್ – ತಕ್ಷಣದಿಂದಲೇ ಆದೇಶ ಜಾರಿ

ತೋಷಖಾನ ಭ್ರಷ್ಟಾಚಾರ ಪ್ರಕರಣದ ಸಂಬಂಧ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಅರೆಸ್ಟ್‌ ಆಗಿದ್ದರು. ಆದರೆ ಅವರು ಅರೆಸ್ಟ್‌ ಆಗುವ ವೇಳೆಗೆ ಅಂಚೆ ಮತದಾನ ಪ್ರಕ್ರಿಯೆ ಮುಗಿದಿತ್ತು. ಹೀಗಾಗಿ ಇಮ್ರಾನ್ ಖಾನ್ ಹಾಗೂ ಖಾನ್‌ ಪತ್ನಿ ಬುಶ್ರಾ ಬೀಬಿ ಗೆ ಅಂಚೆ ಮತದಾನದಲ್ಲಿ ಭಾಗವಹಿಸಲು ಅವರಿಗೆ ಸಾಧ್ಯವಾಗಲಿಲ್ಲ. ಇಂದು ಅವರು ಅಂಚೆ ಮತಪತ್ರದ ಮೂಲಕ ಜೈಲಿನಿಂದಲೇ ಮತ ಚಲಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಅಂಚೆ ಮೂಲಕ ಮತ ಚಲಾಯಿಸಿದ ರಾಜಕೀಯ ನಾಯಕರಲ್ಲಿ ಮಾಜಿ ವಿದೇಶಾಂಗ ಸಚಿವ ಶಾ ಮಹಮ್ಮದ್ ಖುರೇಷಿ, ಪಂಜಾಬ್ ಮಾಜಿ ಮುಖ್ಯಮಂತ್ರಿ ಚೌಧರಿ ಪರ್ವೇಜ್ ಇಲಾಹಿ, ಅವಾಮಿ ಮುಸ್ಲಿಂ ಲೀಗ್ ಮುಖ್ಯಸ್ಥ ಶೇಖ್ ರಶೀದ್ ಮತ್ತು ಮಾಜಿ ಸಚಿವ ಫವಾದ್‌ ಚೌಧರಿ ಅವರು ಸೇರಿದ್ದಾರೆ ಎಂದು ಅಡಿಯಾಲಾ ಜೈಲಿನ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಗಣಕೀಕೃತ ರಾಷ್ಟ್ರೀಯ ಗುರುತಿನ ಚೀಟಿ(ಸಿಎನ್‌ಐಸಿ) ಹೊಂದದೆ ಇರುವ ಕಾರಣ ಅಡಿಯಾಲಾ ಜೈಲಿನಲ್ಲಿರುವ 7 ಸಾವಿರ ಕೈದಿಗಳಲ್ಲಿ 100ಕ್ಕಿಂತಲೂ ಕಡಿಮೆ ಕೈದಿಗಳು ಮತ ಚಲಾಯಿಸಲು ಅರ್ಹತೆ ಪಡೆದಿದ್ದರು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

Shwetha M