ಜೈನಮುನಿ ಹತ್ಯೆ ಹಿಂದೆ ಐಸಿಸ್ ಉಗ್ರರ ಕೈವಾಡ ಎಂದು ಸಿದ್ದು ಸವದಿ ಆರೋಪ – ನಿಮ್ಮ ಬಳಿ ಮಾಹಿತಿಯಿದ್ದರೆ ತನಿಖಾಸಂಸ್ಥೆಗೆ ನೀಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

ಜೈನಮುನಿ ಹತ್ಯೆ ಹಿಂದೆ ಐಸಿಸ್ ಉಗ್ರರ ಕೈವಾಡ ಎಂದು ಸಿದ್ದು ಸವದಿ ಆರೋಪ – ನಿಮ್ಮ ಬಳಿ ಮಾಹಿತಿಯಿದ್ದರೆ ತನಿಖಾಸಂಸ್ಥೆಗೆ ನೀಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನ್ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದೆ. ಇದೀಗ ಈ ಪ್ರಕರಣದ ಬಗ್ಗೆ ಬಿಜೆಪಿ ಶಾಸಕ ಸಿದ್ದು ಸವದಿ ಗಂಭೀರ ಆರೋಪ ಮಾಡಿದ್ದಾರೆ. ಜೈನ ಮುನಿಗಳ ಹತ್ಯೆ ಪ್ರಕರಣದ ಹಿಂದೆ ಐಸಿಸ್  ಚಿತಾವಣೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಿತ್ರಹಿಂಸೆ ನೀಡಿ ಕರೆಂಟ್ ಶಾಕ್ ಕೊಟ್ಟು ಕೊಂದಿದ್ದಾರೆ. ಇದರ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ ಎಂದು ಆರೋಪ ಮಾಡಿದ್ದಾರೆ. ಬಿಜೆಪಿ ಶಾಸಕ ಸಿದ್ದು ಸವದಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ನಿಮ್ಮ ಬಳಿ ಮಾಹಿತಿ ಇದ್ದರೆ ತನಿಖಾ ಸಂಸ್ಥೆಗಳಿಗೆ ನೀಡಿ ಎಂದಿದ್ದಾರೆ.

ಇದನ್ನೂ ಓದಿ: ಬೆಳಗಾವಿಯ ಜೈನಮುನಿ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ – ಹಣ ವಾಪಸ್ ಕೇಳಿದ್ದಕ್ಕೆ ಆಪ್ತರಿಂದಲೇ ಮರ್ಡರ್

ಈ ಕೃತ್ಯದ ಹಿಂದೆ ಹಿಂದೆ ಐಸಿಸ್ ಉಗ್ರರ ಚಿತಾವಣೆ ಇದೆ. ಆದರೆ ಸರ್ಕಾರದ ನಡೆ ಸಂಶಯಾಸ್ಪದವಾಗಿದೆ. ಸರ್ವ ಸಂಗತ್ಯಾಗ ಮಾಡಿದ ಮುನಿಗಳ ಹತ್ಯೆಯ ಹಿಂದೆ ಪಿತೂರಿ ಇದೆ. ಜೈನ ಮುನಿಗಳ ಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ನೀಡಬೇಕು ಎಂದು ಶಾಸಕ ಲಕ್ಷ್ಣಣ ಸವದಿ ಆಗ್ರಹಿಸಿದರು. ಭಕ್ತರು ಆರ್ಥಿಕ ವ್ಯವಹಾರ ಮಾಡಿರಬಹುದು. ಸಂಸ್ಕಾರ ಕೊಡುವ ಮುನಿಗಳು ಆರ್ಥಿಕ ವ್ಯವಹಾರ ಮಾಡಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸರ್ಕಾರ ಮುಚ್ಚಿಡುವ ಯತ್ನ ಮಾಡುತ್ತಿದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ದೂರಿದರು.

ಬಿಜೆಪಿ ಶಾಸಕ ಸಿದ್ದು ಸವದಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಪ್ರಿಯಾಂಕ್ ಖರ್ಗೆ, ಜೈನ ಮುನಿ ಹತ್ಯೆ ವಿಚಾರವಾಗಿ ಬಿಜೆಪಿ ನಾಯಕರ ಬಳಿ ಮಾಹಿತಿ ಇದ್ದರೆ ತನಿಖಾ ಸಂಸ್ಥೆಗಳಿಗೆ ನೀಡಿ ಎಂದು ಹೇಳಿದ್ದಾರೆ.  ವಿಧಾನಸೌಧದಲ್ಲಿ ಮಾತನಾಡಿದ ಅವರು, ‌ ಐಸಿಸ್‌ ನಿಂದ ಹತ್ಯೆಯಾಗಿದೆ ಅಂತಾ ಸಿದ್ದು ಸವದಿ‌ ಹೇಳಿದ್ದಾರೆ. ನಿಮ್ಮ ಬಳಿ ಮಾಹಿತಿ ಇದ್ದರೆ ತನಿಖಾ ಏಜೆನ್ಸಿ ಗಳಿಗೆ ಕೊಡಿ ಎಂದು ಒತ್ತಾಯಿಸಿದರು. ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಗೃಹ ಇಲಾಖೆ ಪಾರದರ್ಶಕ ತನಿಖೆ ನಡೆಸುತ್ತಿದೆ. ತನಿಖೆ ನಡೆಯುವಾಗ ಎಲ್ಲವನ್ನೂ ತೆರೆದಿಡಲು ಆಗಲ್ಲ, ಆದರೆ ಪ್ರಾಥಮಿಕ ತನಿಖೆಯಲ್ಲಿ ವೈಯಕ್ತಿಕ ಕಾರಣ ಎಂದು ತಿಳಿದುಬಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ಕುರಿತಂತೆ ಹಿರೇಕೋಡಿ ಗ್ರಾಮದ ನಂದಿ ಆಶ್ರಮಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಅವರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಜೈನ ಸಮುದಾಯದ ಮುಖಂಡರ ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ನಂತರ ಮಾದ್ಯಮಗಳ ಜೊತೆ ಮಾತನಾಡಿದ ಎಡಿಜಿಪಿ ಹೀತೇಂದ್ರ, ಮಹಾರಾಜರ ಹತ್ಯೆ ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತೇವೆ, ನಿಗದಿತ ಅವದಿಯೊಳಗೆ ದೋಷಾರೋಪಣೆ ಪಟ್ಟಿ ಸಲ್ಲಿಸುತ್ತೇವೆ. ನ್ಯಾಯಾಲಯದಿಂದ ಗರಿಷ್ಠ ಶಿಕ್ಷೆ ಆಗುವ ನಿಟ್ಟಿನಲ್ಲಿ ಇಲಾಖೆ ಕೆಲಸ ಮಾಡುತ್ತೆ ಎಂದು ಹೇಳಿದ್ದಾರೆ.

suddiyaana