ಫೆಬ್ರವರಿ ಅಂತ್ಯಕ್ಕೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇ ಲೋಕಾರ್ಪಣೆ – ನಿತಿನ್ ಗಡ್ಕರಿ ಘೋಷಣೆ

ಫೆಬ್ರವರಿ ಅಂತ್ಯಕ್ಕೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇ ಲೋಕಾರ್ಪಣೆ – ನಿತಿನ್ ಗಡ್ಕರಿ ಘೋಷಣೆ

ಫೆಬ್ರವರಿ ಅಂತ್ಯಕ್ಕೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇ ಲೋಕಾರ್ಪಣೆಯಾಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಣೆ ಮಾಡಿದ್ದಾರೆ. ಜನವರಿ 5ರಂದು ಗುರುವಾರ, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೆ ಪರಿಶೀಲನೆ ನಡೆಸಿದರು. ಫೆಬ್ರವರಿ ಅಂತ್ಯಕ್ಕೆ ದಶಪಥ ಹೆದ್ದಾರಿಯನ್ನು ಉದ್ಘಾಟಿಸಲಾಗುವುದು. ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ಅಥವಾ ರಾಷ್ಟ್ರಪತಿಗಳನ್ನು ಆಹ್ವಾನಿಸುತ್ತೇವೆ ಎಂದು ಇದೇ ವೇಳೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಇದನ್ನೂ ಓದಿ:   ವಿಧಾನಸೌಧದಲ್ಲಿ ಲಕ್ಷ ಲಕ್ಷ ಹಣ ಪತ್ತೆ – ಸರ್ಕಾರದ ವಿರುದ್ಧ ಸಿದ್ದು, ಡಿಕೆಶಿ ಗರಂ

ರಾಮನಗರಕ್ಕೆ ಹೆಲಿಕಾಫ್ಟರ್​ನಲ್ಲಿ ಆಗಮಿಸಿದ ನಿತಿನ್​ ಗಡ್ಕರಿ, ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಪರಿಶೀಲನೆ ನಡೆಸಿದರು. ಬಳಿಕ ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅಥವಾ ರಾಷ್ಟ್ರಪತಿಗಳು ದಶಪಥ ಹೆದ್ದಾರಿಯನ್ನು ಉದ್ಘಾಟಿಸಲಿದ್ದಾರೆ ಎಂದರು. ಸ್ಥಳೀಯ ಶಾಸಕರು ಮತ್ತು ಸಂಸದರು ಒಂದಷ್ಟು ಸಲಹೆ ನೀಡಿದ್ದಾರೆ. ಎಲ್ಲವನ್ನೂ ಪರಿಶೀಲನೆ ಮಾಡಲಾಗುವುದು. ಹೆದ್ದಾರಿ ಪೂರ್ಣಗೊಂಡರೆ 90 ನಿಮಿಷದಲ್ಲಿ ಬೆಂಗಳೂರು-ಮೈಸೂರು ನಡುವೆ ಸಂಚಾರ ಮಾಡಬಹುದು. ಹೆದ್ದಾರಿಯಿಂದ ಮೈಸೂರು, ಶ್ರೀರಂಗಪಟ್ಟಣ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ. ಪಬ್ಲಿಕ್ ಟ್ರಾನ್ಸ್‌ಪೋರ್ಟ್​ಗೂ ಹೆಚ್ಚಿನ ಒತ್ತು ನೀಡುತ್ತೇವೆ. ರಾಮನಗರ ಹಾಗೂ ಮಂಡ್ಯ ಜಿಲ್ಲೆಗೆ ಕನೆಕ್ಟಿವಿಟಿ ಸುಗಮ ಆಗಲಿದೆ. ಐಟಿ ಉದ್ಯಮಕ್ಕೂ ಇದು ಅನುಕೂಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

suddiyaana