ಚಿಕ್ಕಬಳ್ಳಾಪುರದಲ್ಲಿ ‘ಮೋದಿ’ ಹವಾ – ಪ್ರಧಾನ ಮಂತ್ರಿಗಳಿಂದ ಮೆಡಿಕಲ್ ಕಾಲೇಜು ಉದ್ಘಾಟನೆ

ಚಿಕ್ಕಬಳ್ಳಾಪುರದಲ್ಲಿ ‘ಮೋದಿ’ ಹವಾ – ಪ್ರಧಾನ ಮಂತ್ರಿಗಳಿಂದ ಮೆಡಿಕಲ್ ಕಾಲೇಜು ಉದ್ಘಾಟನೆ

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ತಯಾರಿ ನಡೆಯುತ್ತಿದೆ. ಇದಕ್ಕೆ ಸರಿಯಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕರ್ನಾಟಕ ಪ್ರವಾಸವೂ ಜೋರಾಗಿಯೇ ಸಾಗುತ್ತಿದೆ. ಇವತ್ತು ಮತ್ತೆ ಕರ್ನಾಟಕಕ್ಕೆ ಬಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರದಲ್ಲಿ ಖಾಸಗಿ ಮೆಡಿಕಲ್ ಕಾಲೇಜು ಉದ್ಘಾಟನೆ ಮಾಡಿದ್ದಾರೆ. ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮಸ್ಥಳ ಮುದ್ದೇನಹಳ್ಳಿ ಗ್ರಾಮಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸತ್ಯಸಾಯಿ ಆಶ್ರಮದಲ್ಲಿ ಖಾಸಗಿ ಮೆಡಿಕಲ್ ಕಾಲೇಜು ಉದ್ಘಾಟನೆ ಮಾಡಿದ್ದಾರೆ.

ಇದನ್ನೂ ಓದಿ:  ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ – ವರುಣಾದಿಂದ ಸಿದ್ದರಾಮಯ್ಯ.. ಯಾರಿಗೆ ಯಾವ ಕ್ಷೇತ್ರ..?

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ ಸತ್ಯಸಾಯಿ ಗ್ರಾಮದಲ್ಲಿ ಸುಮಾರು 400 ಕೋಟಿ ರೂಪಾಯಿ ವೆಚ್ಚದಲ್ಲಿ ಸತ್ಯಸಾಯಿ ಲೋಕಸೇವಾ ಟ್ರಸ್ಟ್‌ನಿಂದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗಿದ್ದು, ಪ್ರಧಾನ ಮಂತ್ರಿಗಳಿಂದ ಉದ್ಘಾಟನೆಗೊಂಡಿದೆ. ಮಧುಸೂದನ್ ಸಾಯಿ ವೈದ್ಯಕೀಯ ಸಂಸ್ಥೆ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ಮೋದಿಗೆ ಸ್ಮರಣಿಕೆ ನೀಡಿ ಸನ್ಮಾನ ಮಾಡಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಡಾ.ಕೆ.ಸುಧಾಕರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, ‘ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ನಮಸ್ಕಾರ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದರು. ‘ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಜನ್ಮಸ್ಥಳವಾಗಿದೆ. ಇಂತಹ ಪುಣ್ಯಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ’ ಎಂದರು.

ಬೆಂಗಳೂರಿನ ಹೆಚ್ಎಎಲ್ ಏರ್‌ಪೋರ್ಟ್‌ನಿಂದ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮಕ್ಕೆ ಬಂದಿಳಿದ ಮೋದಿ, ಅಲ್ಲಿಂದ ನೇರವಾಗಿ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯನವರ ಸಮಾಧಿ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಸರ್ ಎಂ.ವಿಶ್ವೇಶ್ವರಯ್ಯನವರ ಸಮಾಧಿ ಸ್ಮಾರಕ ಹಾಗೂ ಮ್ಯೂಸಿಯಂಗೆ ಪ್ರಧಾನಿಗಳು ಭೇಟಿ ನೀಡಿದರು.

suddiyaana