ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟು ಲೋಕಾರ್ಪಣೆ – ಕಾಂಗ್ರೆಸ್ ಎದುರೇ ಮೋದಿಯನ್ನ ಹೊಗಳಿದ ಚಂದ್ರಬಾಬು ನಾಯ್ಡು

ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟು ಲೋಕಾರ್ಪಣೆ –  ಕಾಂಗ್ರೆಸ್ ಎದುರೇ ಮೋದಿಯನ್ನ ಹೊಗಳಿದ ಚಂದ್ರಬಾಬು ನಾಯ್ಡು

ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಲಾದ 33 ಕ್ರಸ್ಟ್ ಗೇಟುಗಳನ್ನು ಇಂದು ಲೋಕಾರ್ಪಣೆ ಗೊಳಿಸಲಾಯಿತು. ತುಂಗಭದ್ರಾ ಜಲಾಶಯದ ಮೇಲೆ ಇಂದು ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 18 ನಂಬರಿನ ಗೇಟ್ ಉದ್ಘಾಟಿಸಿದರೆ, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ 17 ನೇ ನಂಬರಿನ ಗೇಟನ್ನು ಉದ್ಘಾಟಿಸಿದರು. ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು, 19 ನೇ ನಂಬರಿನ ಗೇಟನ್ನು ಹಾಗೂ ತೆಲಂಗಾಣ ಸಿಎಂ ಎ.ರೇವಂತರೆಡ್ಡಿ 20 ನೇ ನಂಬರಿನ ಗೇಟನ್ನು ಉದ್ಘಾಟಿಸಿದರು.

ಸಿಎಂ ಡಿ.ಕೆ.ಶಿವಕುಮಾರ್, ಗಂಗಾಧರ ಅಜ್ಜಯ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ನೂತನ ಗೇಟುಗಳನ್ನು ಲೋಕಾರ್ಪಣೆ ಗೊಳಿಸಿದರು. ಒಂದೇ ಕಾರಿನಲ್ಲಿ ಆಗಮಿಸಿದ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮೂವರು ಸಿಎಂ ಗಳು ಗೇಟುಗಳಿಗೆ ಪೂಜೆ ಸಲ್ಲಿಸಿ ಬಟನ್ ಒತ್ತುವ ಮೂಲಕ ನೂತನ ಕ್ರಸ್ಟ್ ಗೇಟುಗಳನ್ನು ಲೋಕಾರ್ಪಣೆ ಗೊಳಿಸಿದರು. ಒಂದೊಂದು ಗೇಟ್ ಗೂ ಒಬ್ಬೊಬ್ಬ ಅರ್ಚಕರಿಂದ ಪ್ರತ್ಯೇಕ ಪೂಜೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಲಾಶಯದ ಗೇಟುಗಳ ಅಳವಡಿಕೆ ಹಾಗೂ ಗುಣಮಟ್ಟ ಕುರಿತು ಜಲಾಶಯದ ತಜ್ಞ ಕನ್ನಯ್ಯನಾಯ್ಡು ಹಾಗು ತುಂಗಭದ್ರಾ ಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದರು.

 ಕೈ ಎದುರೇ ಮೋದಿಯನ್ನ ಹೊಗಳಿದ ಚಂದ್ರಬಾಬು ನಾಯ್ಡು

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆ ಹಿನ್ನೆಲೆ ಕೊಪ್ಪಳ ತಾಲೂಕಿನ ಮುನಿರಾಬಾದ್​ನಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ರೈತ ಬಾಂಧವರಿಗೆ ನಮಸ್ಕಾರ ಅಂತಾ ಕನ್ನಡದಲ್ಲೇ ಭಾಷಣ ಆರಂಭಿಸಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಕಾಂಗ್ರೆಸ್​​ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್​​ ಮತ್ತು ರೇವಂತ್​​ ರೆಡ್ಡಿ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ್ದಾರೆ. ನದಿಗಳ ಜೋಡಣೆಯಿಂದ ನೀರಿನ ಸಮಸ್ಯೆಗೆ ಪರಿಹಾರ ದೊರೆಯಲಿದ್ದು, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಇದು ನಡೆಯುವ ವಿಶ್ವಾಸ ತನಗಿದೆ ಎಂದವರು ಹೇಳಿದ್ದಾರೆ.

ನನಗೆ ಕನ್ನಡ ಬಂದಿದ್ರೆ ಇನ್ನೂ ಚೆನ್ನಾಗಿ ಮಾತನಾಡುತ್ತಿದ್ದೆ ಎಂದ ನಾಯ್ಡು, ತುಂಗಭದ್ರಾ ತಾಯಿಗೆ ಶಿರಭಾಗಿ ನಮಸ್ಕಾರ ಮಾಡ್ತೀನಿ. ತುಂಗಾ ಪಾನಃ ಗಂಗಾ ಸ್ನಾನಃ ಎಂಬ ಮಾತಿದೆ. ತುಂಗಾ ನೀರು ಕುಡಿಯಲು ಶುದ್ಧ ಎಂದೇ ಪ್ರಸಿದ್ದಿ ಪಡೆದಿದೆ. ಕೊಚ್ಚಿ ಹೋಗಿದ್ದರಿಂದ ನೂತನ ಕ್ರಸ್ಟ್‌ ಗೇಟ್‌ ಲೋಕಾರ್ಪಣೆ ಆಗಿದೆ. ಕೊಚ್ಚಿ ಹೋಗಿದ್ದ ಒಂದು ಗೇಟ್‌ನ್ನು ಮಾತ್ರ ಹೊಸದಾಗಿ ಅಳವಡಿಸಿಲ್ಲ. ಬದಲಾಗಿ ಜಲಾಶಯದ ಎಲ್ಲಾ 33 ಗೇಟ್ ಹೊಸದಾಗಿ ಅಳವಡಿಸಲಾಗಿದೆ. ಕೇವಲ ಆರು ತಿಂಗಳಲ್ಲಿ ಈ ಕೆಲಸ ಮುಗಿದಿದ್ದಕ್ಕೆ ಹೆಮ್ಮೆ ಇದೆ. ಮೂವರು ಸಿಎಂಗಳು ಒಂದೇ ವೇದಿಕೆಯಲ್ಲಿ ಸೇರಿದ್ದು ಒಂದು ಇತಿಹಾಸ. ಹೊಸ ಕ್ರಸ್ಟ್‌ ಗೇಟ್‌ ಅಳವಡಿಕೆ ವಿಳಂಬವಾಗಿದ್ದರೆ ಭಾರಿ ಅಪಾಯ ಆಗುತ್ತಿತ್ತು. ಇದೀಗ ಆ ಅಪಾಯ ದೂರವಾಗಿದೆ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶ ಬಹಳ ವೇಗವಾಗಿ ಮುನ್ನಡೆಯುತ್ತಿದೆ. ಸರಿಯಾದ ವ್ಯಕ್ತಿ, ಸರಿಯಾದ ಸ್ಥಳ ಮತ್ತು ಸರಿಯಾದ ಸಮಯ ಇದ್ದರೆ ಎಲ್ಲ ಸಾಧ್ಯವೆಂದು ಪ್ರತಿದಾರಿ ಬಾರಿ ನಾನು ಹೇಳುತ್ತೇನೆ.  ಅದು ನರೇಂದ್ರ ಮೋದಿ ಎಂದವರು ಹೇಳಿದ್ದಾರೆ.

Kishor KV

Leave a Reply

Your email address will not be published. Required fields are marked *